ಬೆಂಗಳೂರು | ರಜೆ ತೆಗೆದುಕೊಂಡಿದ್ದಕ್ಕೆ ಕಂಪನಿ ಮ್ಯಾನೇಜರ್ ಕಿರುಕುಳ: ಕಾರ್ಮಿಕ ಆತ್ಮಹತ್ಯೆ

Date:

ಒಂದು ದಿನ ರಜೆ ತೆಗೆದುಕೊಂಡಿದಕ್ಕೆ ಕೆಡಿಡಿಎಲ್‌ ವಾಚ್ ತಯಾರಿಕೆ ಕಂಪನಿಯ ಮ್ಯಾನೇಜರ್ ಮತ್ತು ಸೂಪರವೈಸರ್ ನೀಡಿದ್ದ ಕಿರುಕುಳಕ್ಕೆ ಬೇಸತ್ತು ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ನಡೆದಿದೆ.

- Advertisement -

ಗೋವಿಂದ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಈತ ಮೂಲತಃ ಆಂಧ್ರಪ್ರದೇಶದ ಗುಡಿಬಂಡೆ ನಿವಾಸಿ. ಕಳೆದ ಆರು ವರ್ಷಗಳಿಂದ ಬೆಂಗಳೂರಿನ ಪೀಣ್ಯ ಕೆಡಿಡಿಎಲ್‌ ವಾಚ್‌ ತಯಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆ, ಬೆಂಗಳೂರಿನ ಆರ್‌ಎಮ್‌ಪಿ ಅಪಾರ್ಟ್‌ಮೆಂಟ್‌ ಮೇಂಟೆನೆನ್ಸ್ ಕೆಲಸ ಮಾಡಿಕೊಂಡು ದಾಸರಹಳ್ಳಿಯಲ್ಲಿ ನೆಲೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಕಾರ್ಮಿಕ ಗೋವಿಂದ ರಜೆ ತೆಗೆದುಕೊಂಡ ಹಿನ್ನೆಲೆ, ಕಂಪನಿಯ ಮ್ಯಾನೇಜರ್ ಹಾಗೂ ಸೂಪರ್‌ವೈಸರ್‌ ಕಿರುಕುಳ ನೀಡುತ್ತಿದ್ದರು. ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕುತ್ತಿದ್ದರು.

ಇದರಿಂದ ಬೇಸತ್ತ ಕಾರ್ಮಿಕ ಎಂದಿನಂತೆ ಕಂಪನಿ ಕೆಲಸ ಮುಗಿಸಿ ರಾತ್ರಿ ವೇಳೆ ಅಪಾರ್ಟ್‌ಮೆಂಟ್‌ ಸ್ಟೇರ್ ಕೇಸ್ ಮೆಟ್ಟಿಲಿನ ಕಂಬಿಗೆ ತಾಯಿಯ ಸೀರೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಶಂಕೆ; ತನಿಖೆಗೆ ಒತ್ತಾಯಿಸಿ ದೂರು ನೀಡಿದ ಯುವತಿ

ಸ್ಥಳಕ್ಕೆ ಆಗಮಿಸಿದ ಬಾಗಲಗುಂಟೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಆರೋಪಿಗಳಾದ ಮ್ಯಾನೇಜರ್ ಗುರುರಾಜ, ಸೂಪರ್‌ವೈಸರ್ ನಂಜಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ…ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...