ಜನಸಂಖ್ಯೆಗೆ ತಕ್ಕಂತೆ ಬೆಂಗಳೂರಿನಲ್ಲಿ ಶೌಚಾಲಯಗಳಿಲ್ಲ: ಹೈಕೋರ್ಟ್‌

Date:

  • ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ
  • ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸುವುದು ಸರ್ಕಾರದ ಕರ್ತವ್ಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ. ಇವುಗಳ ನಿರ್ವಹಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಫಲವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

- Advertisement -

ಬೆಂಗಳೂರಿನಲ್ಲಿರುವ ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಲೆಟ್ಜ್ ಕಿಟ್ ಫೌಂಡೇಶನ್ ಸಂಸ್ಥೆ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮಂಗಳವಾರ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಅರ್ಜಿ ವಿಚಾರಣೆ ನಡೆಸಿದೆ. ಅರ್ಜಿ ಸಂಬಂಧ ಸರ್ಕಾರ ತನ್ನ ಯಾವುದೇ ನಿಲುವು ತಿಳಿಸಿಲ್ಲ.

“ಬೆಂಗಳೂರಿನಲ್ಲಿರುವ ಶೌಚಾಲಯಗಳು ದುಸ್ಥಿತಿಯಲ್ಲಿವೆ. ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ. ಮಹಿಳಾ ಶೌಚಾಲಯಗಳಲ್ಲಿನ ಕಿಟಕಿಗಳು ಕಿತ್ತು ಹೋಗಿವೆ. ಶೌಚಾಲಯಗಳು ನೈರ್ಮಲ್ಯದಿಂದ ಕೂಡಿವೆ” ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಪಾವತಿಯಾಗದ ಬಾಕಿ | ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗುತ್ತಿಗೆದಾರರ ಸಂಘ

“ಸರ್ಕಾರ ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸಬೇಕು. ಇದು ಸರ್ಕಾರದ ಕರ್ತವ್ಯ. ಈ ಹೊಣೆಯಿಂದ ಸರ್ಕಾರ ಹಿಂದೆ ಸರಿಯಬಾರದು” ಎಂದು ಹೇಳಿದೆ.

ಇನ್ನು 3 ವಾರಗಳಲ್ಲಿ ಸಾರ್ವಜನಿಕರಿಗೆ ಶೌಚಾಲಯ ಒದಗಿಸುವ ವ್ಯವಸ್ಥೆ ಕುರಿತು ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...