ಬೆಂಗಳೂರು | ನಿತ್ಯ ಕುಡಿದು ಹಿಂಸಿಸುತ್ತಿದ್ದ ಅಣ್ಣನನ್ನೇ ಕೊಂದ ತಮ್ಮ

Date:

  • ಪುಲಕೇಶಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಪತಿ ಕಾಟ ತಾಳಲಾಗದೆ ಮೈದುನನಿಗೆ ಕರೆ ಮಾಡಿದ್ದ ಸಂಧ್ಯಾ

ಕುಡಿದು ಬಂದು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ಸ್ವಂತ ತಮ್ಮನೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ.

- Advertisement -

ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಕಾರ್ತಿಕ್‌ (30) ಕೊಲೆಯಾದ ದುರ್ದೈವಿ. ಕೊಲೆ ಆರೋಪಿ ಹಾಗೂ ಕಾರ್ತಿಕ್‌ನ ತಮ್ಮ ವಿಜಯ್, ಇಬ್ಬರು ಸಹೋದರರು ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕೊಲೆಯಾದ ಕಾರ್ತಿಕ್ ಹಾಗೂ ಪತ್ನಿ ಸಂಧ್ಯಾ ಇಬ್ಬರು ನಗರದ ದೊಡ್ಡಗುಂಟೆಯಲ್ಲಿ ನೆಲೆಸಿದ್ದರು. ನಿತ್ಯ ಕಾರ್ತಿಕ್ ಕುಡಿದುಕೊಂಡು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನು. ಇದರಿಂದ ಬೇಸತ್ತಿದ್ದ ಸಂಧ್ಯಾ ಕಾರ್ತಿಕ್‌ನ ತಮ್ಮನಿಗೆ ಕರೆ ಮಾಡಿ ಮನೆಗೆ ಬಂದು ಬುದ್ಧಿವಾದ ಹೇಳುವಂತೆ ಕೇಳಿದ್ದಳು.

ಕಾರ್ತಿಕ್‌ನು ನಿತ್ಯ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದರಿಂದ ದಂಪತಿಯ ಮಧ್ಯೆ ಮನಸ್ತಾಪ ಬೆಳೆದಿತ್ತು. ಪತಿ ಕಾಟ ತಾಳಲಾಗದೆ ಸಂಧ್ಯಾ ಮೈದುನನಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡಿದ್ದಳು.

ಕಾರ್ತಿಕ್‌ನ ತಮ್ಮ ವಿಜಯ್ ಬೇರೆಡೆ ವಾಸವಿದ್ದನು. ಅತ್ತಿಗೆ ಕರೆ ಮಾಡಿದ ಹಿನ್ನೆಲೆ, ಮಂಗಳವಾರ ಮಧ್ಯಾಹ್ನ ದೊಡ್ಡಗುಂಟೆಯಲ್ಲಿರುವ ಅಣ್ಣನ ಮನೆಗೆ ತಮ್ಮ ವಿಜಯ್ ತೆರಳಿದ್ದನು.

ಈ ಸುದ್ದಿ ಓದಿದ್ದೀರಾ? ಮೂರನೇ ದಿನ ಶಕ್ತಿ ಯೋಜನೆಯ ಲಾಭ ಪಡೆದ 51 ಲಕ್ಷ ಮಹಿಳೆಯರು

ಈ ವೇಳೆ ಸಹೋದರರ ಮಧ್ಯೆ ಜಗಳವಾಗಿದೆ. ಸೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ಗಲಾಟೆಯ ವೇಳೆ ತಮ್ಮ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಆರೋಪಿಯನ್ನು ಪುಲಕೇಶಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...