ಬೆಂಗಳೂರು | ಜುಲೈ 15ರವರೆಗೆ ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ಬಿಸಿ

Date:

Advertisements
  • ಸಂಪೂರ್ಣ ಸರ್ವೀಸ್ ರಸ್ತೆ ಸಂಚಾರ ಮುಖ್ಯ ರಸ್ತೆಯೊಂದಿಗೆ ವಿಲೀನ
  • ಅಸ್ತಿತ್ವದಲ್ಲಿರುವ ಮೇಲ್ಸೇತುವೆಗೆ ಹೆಚ್ಚುವರಿಯಾಗಿ ರ‍್ಯಾಂಪ್ ನಿರ್ಮಾಣ

ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ನಗರದ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದ್ದು, ಜುಲೈ 15ರವರೆಗೆ ಆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬೆಂಗಳೂರು ಸಂಚಾರ ಪೊಲೀಸ್, “ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಹೆಬ್ಬಾಳ ಪೊಲೀಸ್ ಠಾಣೆಯಿಂದ ನಗರದ ಕಡೆಗೆ ಹೋಗುವ ಸರ್ವೀಸ್ ರಸ್ತೆ ಬಂದ್ ಆಗಿದೆ. ಸಂಪೂರ್ಣ ಸರ್ವಿಸ್ ರಸ್ತೆ ಸಂಚಾರವನ್ನು ಮುಖ್ಯ ರಸ್ತೆಯೊಂದಿಗೆ ವಿಲೀನಗೊಳಿಸಲಾಗುತ್ತಿದೆ. ಆದ್ದರಿಂದ ನಗರದ ಕಡೆಗೆ ನಿಧಾನ ಸಂಚಾರವಿದೆ” ಎಂದು ಹೇಳಿದೆ.

ಸಂಚಾರ ದಟ್ಟಣೆಗೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸಲು ಸಂಚಾರ ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ಸಾರ್ವಜನಿಕರು ಸಹಕರಿಸಲು ಕೋರಿದೆ.

Advertisements

ಬೆಂಗಳೂರಿನಲ್ಲಿ ಅತೀ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವ ಪ್ರದೇಶಗಳಲ್ಲಿ ಒಂದಾಗಿರುವ ಹೆಬ್ಬಾಳದಲ್ಲಿ ಸಂಚಾರ ಸುಗಮಗೊಳಿಸುವ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ಮೇಲ್ಸೇತುವೆಗೆ ಹೆಚ್ಚುವರಿಯಾಗಿ ರ‍್ಯಾಂಪ್ ನಿರ್ಮಾಣ ಮಾಡುವ ಕಾರ್ಯ ಇದೀಗ ಆರಂಭವಾಗಿದೆ. ₹87 ಕೋಟಿ ವೆಚ್ಚದಲ್ಲಿ 700 ಮೀ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ.

ಹೆಚ್ಚುವರಿ ರ‍್ಯಾಂಪ್ ನಿರ್ಮಿಸುವ ಕಾಮಗಾರಿ ಇನ್ನು ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಯೋಜನೆಯನ್ನು ಮೊದಲು 2015 ರಲ್ಲಿ ಯೋಜಿಸಲಾಗಿತ್ತು, ಆದರೆ ಹಲವಾರು ಕಾರಣಗಳಿಂದ ಯೋಜನೆ ಜಾರಿಗೆ ಬರಲು ವಿಳಂಬವಾಯಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಲೀಕರ ಮನೆಗೆ ಕನ್ನ ಹಾಕಿದ ಲಿವಿಂಗ್ ಟುಗೆದರ್ ಜೋಡಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ವಾರದ ಆರಂಭದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದೆ. ನಿರ್ಮಾಣ ಕಾರ್ಯವು ಎಸ್ಟೀಮ್ ಮಾಲ್‌ನಿಂದ ಪ್ರಾರಂಭಗೊಂಡಿದ್ದು, ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಕೊನೆಗೊಳಿಸಲಿದೆ.

ಈ ಹೆಚ್ಚುವರಿ ರ‍್ಯಾಂಪ್ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ಬರುವ ಪ್ರಯಾಣಿಕರಿಗೆ ಸಹಾಯವಾಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X