ಬೆಂಗಳೂರು | ಪಟಾಕಿ ಅವಘಡಗಳ ಚಿಕಿತ್ಸೆಗೆ 24 ಗಂಟೆ ತುರ್ತು ಸೇವೆ ನೀಡಲು ಸಜ್ಜಾದ ಆಸ್ಪತ್ರೆಗಳು

Date:

ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜನರು ಸಿದ್ಧರಾಗಿದ್ದಾರೆ. ಸುಪ್ರೀಂಕೋರ್ಟ್ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು ಎಂದು ಆದೇಶಿಸಿದೆ. ಈ ಬೆನ್ನಲ್ಲೆ, ಬಿಬಿಎಂಪಿ ಮತ್ತು ನಗರ ಪೊಲೀಸ್ ಇಲಾಖೆ, ನಗರದ ನಾಗರಿಕರಿಗೆ ಹಸಿರು ಪಟಾಕಿ ಬಳಸಿ ಪರಿಸರ ಸಂರಕ್ಷಿಸಿ ಹಾಗೂ ಪಟಾಕಿ ಅವಘಡಗಳಿಂದ ದೂರವಿರಿ ಎಂದು ಸೂಚಿಸಿದೆ. ಪಟಾಕಿ ಹಬ್ಬದ ಸಂದರ್ಭದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ನಗರದ ಮಿಂಟೋ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ದಿನದ 24 ಗಂಟೆ ಕಾರ್ಯ ನಿರ್ವಹಿಸಲು ಸಜ್ಜಾಗಿವೆ.

- Advertisement -

ಪಟಾಕಿ ಹೊಡೆಯುವ ಸಂದರ್ಭದಲ್ಲಿ ಕಣ್ಣಿಗೆ ಚರ್ಮಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಸಮಯದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಯ ಸಿಬ್ಬಂದಿ ಮುಂದಿನ ಒಂದು ವಾರ ದಿನದ 24 ಗಂಟೆ ಕಾರ್ಯನಿರ್ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪಟಾಕಿ ಅಂಟಿಸುವ ಸಂದರ್ಭದಲ್ಲಿ ಉಂಟಾಗುವ ಅವಘಡಗಳಿಗೆ ತುರ್ತು ಚಿಕಿತ್ಸೆ ನೀಡುವ ಸಲುವಾಗಿ ಮಿಂಟೋ ಕಣ್ಣಿನ ಆಸ್ಪತ್ರೆ ಸಿದ್ಧವಾಗಿದೆ. ಚಿಕಿತ್ಸೆಗೆ ಬೇಕಾದ ಔಷಧಿ, ಐ ಡ್ರಾಪ್ಸ್‌ ಸೇರಿದಂತೆ ಎಲ್ಲವನ್ನು ವಾರ್ಡ್‌ಗಳಲ್ಲಿ ಶೇಖರಣೆ ಮಾಡಿಟ್ಟಿದೆ. ಜತೆಗೆ, ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್‌ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್‌ಗಳನ್ನ ಮೀಸಲಿರಿಸಿದೆ.

ತುರ್ತು ಸಹಾಯವಾಣಿ – 9481740137, 08026707176 ಶುರು ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್ ಸಹದೇವ ಹತ್ಯೆ ಪ್ರಕರಣ: ಎಂಟು ಮಂದಿ ಬಂಧನ

ಯಾವುದೇ ತುರ್ತು ಸರ್ಜರಿ ಹಾಗೂ ಗಾಯಗೊಂಡ ರೋಗಿಗೆ ಚಿಕಿತ್ಸೆ ನೀಡಲು ಅದೇ ಬ್ಲಾಕ್ ನಲ್ಲಿಯೇ ಆಪರೇಷನ್ ಬ್ಲಾಕ್ ಕೂಡಾ ಇದ್ದು, ಶಸ್ತ್ರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕಣ್ಣಿನ ಗಾಯಗಳ ಜತೆಗೆ ಮುಖ ಸೇರಿದಂತೆ ದೇಹದ ಇತರೆ ಭಾಗದಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಮೀಸಲಿಡಲು ಕೇಳಿಕೊಳ್ಳಲಾಗಿದೆ ಎಂದು ಮಿಂಟೋ ಕಣ್ಣಿನ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜು ಜಿ. ಹೇಳಿದ್ದಾರೆ.

ಪಟಾಕಿ ಅಂಟಿಸುವ ಸಮಯದಲ್ಲಿ ಕಣ್ಣಿಗೆ ಮಾತ್ರ ಗಾಯವಲ್ಲದೇ, ಪಟಾಕಿಗಳಿಂದ ಸುಟ್ಟು ಗಾಯಗಳಾಗಿದ್ದರೆ, ತುರ್ತು ಚಿಕಿತ್ಸೆ ನೀಡುವ ಸಲುವಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಪ್ರತ್ಯೇಕ ವಾರ್ಡ್‌ ತೆರೆಯಲಾಗುತ್ತದೆ.

ಪಟಾಕಿಯಿಂದ ಗಾಯಗೊಂಡಾಗ ಏನ್ ಮಾಡಬಾರದು?

  • ಪಟಾಕಿಯಿಂದ ಕಣ್ಣಿಗೆ ಗಾಯವಾದಾಗ ಕಣ್ಣುಗಳನ್ನು ಉಜ್ಜಿಕೊಳ್ಳಬೇಡಿ.
  • ಪಟಾಕಿಯ ದೊಡ್ಡ ಕಣವೇನಾದರೂ ಒಳಗೆ ಸಿಕ್ಕಿಹಾಕಿಕೊಂಡಿದ್ದರೆ ಬಲವಂತವಾಗಿ ಎಳೆದು ತೆಗೆಯಲು ಪ್ರಯತ್ನಿಸಬೇಡಿ.
  • ಕಣ್ಣುಗಳನ್ನು ಮುಚ್ಚಿಸಿ ಕೂಡಲೇ ವೈದ್ಯರ ಬಳಿಗೆ ಕರೆದುಕೊಂಡು ಹೋಗಿ.
  • ಗಾಯದ ಜಾಗವನ್ನು ಸ್ವಚ್ಛಗೊಳಿಸಿ ನೀರಿನಲ್ಲಿ ಅದ್ದಿಸಿ. ಆದರೆ, ಐಸ್ ನೀರು ಬಳಸಬೇಡಿ.
  • ಗಾಯ ಸ್ಥಳ ಒಣಗಲು ಬಿಡಿ. ಶುದ್ಧವಾದ ಬಟ್ಟೆಯಿಂದ ಗಾಯವನ್ನು ಮುಚ್ಚಬೇಕು.

ಪಟಾಕಿ ಹಚ್ಚುವ ಮುನ್ನ ಮುನ್ನೆಚ್ಚರಿಕೆ ವಹಿಸಿ

  • ಪಟಾಕಿ ಸಿಡಿಸುವಾಗ ಉದ್ದನೆಯ ಕಡ್ಡಿ ಬಳಸಿ. ಜತೆಗೆ, ಪಟಾಕಿ ಬಾಕ್ಸ್ ಮೇಲೆ ಇರುವ ಎಚ್ಚರಿಕೆಗಳನ್ನು ಓದಿಕೊಳ್ಳಿ.
  • ಮಕ್ಕಳು ಪಟಾಕಿ ಹಚ್ಚುವಾಗ ದೊಡ್ಡವರು ಮಾರ್ಗದರ್ಶನ ಮಾಡಬೇಕು.
  • ಪಟಾಕಿ ಹಚ್ಚುವ ವೇಳೆ, ಪಕ್ಕದಲ್ಲಿ ಒಂದು ಬಕೆಟ್ ನೀರು ಇಟ್ಟುಕ್ಕೊಳ್ಳಿ.
  • ಪಟಾಕಿ ಹಚ್ಚುವ ಸಮಯದಲ್ಲಿ ಕಾಟನ್ ಬಟ್ಟೆ ಬಳಸಿ. ಸಿಂಥೆಟಿಕ್ ಅಥವಾ ಬೇಗನೆ ಸುಡುವ ಸಡಿಲ ಬಟ್ಟೆ ಧರಿಸಬೇಡಿ.
  • ಅರೆಬರೆ ಸುಟ್ಟ ಪಟಾಕಿಯನ್ನು ಕೈಯಲ್ಲಾಗಲಿ, ಕಾಲಲ್ಲಾಗಲಿ ನಂದಿಸುವ ಪ್ರಯತ್ನ ಮಾಡಬಾರದು.
  • ಜನದಟ್ಟಣೆಯ ಪ್ರದೇಶ, ಪಟಾಕಿ ಅಂಗಡಿಗಳ ಮುಂದೆ, ಆಸ್ಪತ್ರೆಗಳ ಬಳಿ, ವೃದ್ಧಾಶ್ರಮಗಳು ಹಾಗೂ ಪೆಟ್ರೋಲ್ ಬಂಕ್ ಬಳಿ ಪಟಾಕಿ ಸುಡಬಾರದು.
  • ಪೋಷಕರು ಮತ್ತು ಮಕ್ಕಳು ಎಚ್ಚರಿಕೆಯಿಂದ ಪಟಾಕಿ ಸಿಡಿಸಿ
  • ಕಣ್ಣಿನ ಸಮಸ್ಯೆ ಇರುವವರು ಪಟಾಕಿಯಿಂದ ದೂರ ಇರಿ, ಸುರಕ್ಷಿತವಾಗಿರಿ.

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಪಟಾಕಿ ಸಿಡಿದು 7 ವರ್ಷದ ಮಗು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳು ಮಗುವನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...