ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ ಸುಮಾರು 17 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚಿಕ್ಕ ಬಾಣಾವರದಲ್ಲಿರುವ ಧನ್ವಂತರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳು ಸೇವಿಸಿ ಆಹಾರದಿಂದಾಗಿ ‘ಫುಡ್ ಪಾಯಿಸನ್’ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.