ಬೆಂಗಳೂರು | ಪತ್ನಿಗೆ ಐಎಎಸ್‌ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ; ದೂರು ದಾಖಲು

Date:

  • ವರದಕ್ಷಿಣೆ ನೀಡಲು ಒಪ್ಪದಿದ್ದಾಗ ಕಿರುಕುಳ ನೀಡಿದ ಕುಟುಂಬಸ್ಥರು
  • ವಿಷ ಸೇವಿಸಿದಾಗ ತಡೆಯದೇ ಸಾಯುವಂತೆ ಪ್ರೇರೇಪಿಸಿದ್ದಾರೆಂದು ಆರೋಪ

ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಕಾಶ್ ವಿರುದ್ಧ ಪತ್ನಿ ವಂದನಾ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಐಎಎಸ್ ಅಧಿಕಾರಿ ಆಕಾಶ್ ಹಾಗೂ ನಿವೃತ್ತ ಡಿಐಜಿ ಪುತ್ರಿ ವಂದನಾ 2022ರ ಜೂನ್‌ನಲ್ಲಿ ಮದುವೆಯಾಗಿದ್ದರು. “ಮದುವೆ ಸಮಯದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಆದರೂ, ಬೆಂಗಳೂರಿನಲ್ಲಿ ಮನೆ ಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ. ಜತೆಗೆ ಹಲ್ಲೆ ಮಾಡುತ್ತಿದ್ದಾರೆ” ಎಂದು ವಂದನಾ ಆರೋಪಿಸಿದ್ದಾರೆ.

“ಪತಿ ಹಾಗೂ ಆತನ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ. ನಾನು ಐಎಎಸ್ ಅಧಿಕಾರಿ ಕನಿಷ್ಠ ₹100 ಕೋಟಿ ಆಸ್ತಿಯನ್ನಾದರೂ ಪಡೆದು ಮದುವೆಯಾಗಬಹುದಿತ್ತೆಂದು ಹಿಯಾಳಿಸಿದ್ದಾರೆ. ವರದಕ್ಷಿಣೆ ನೀಡಲು ಒಪ್ಪದಿದ್ದಕ್ಕೆ ಕಿರುಕುಳ ನೀಡುತ್ತಿದ್ದಾರೆ. ಮಹಿಳಾ ಐಎಎಸ್ ಅಧಿಕಾರಿಯೊಬ್ಬರೊಂದಿಗೆ ಫೋನ್ ಕರೆಗಳ ಮಲಕ ನಿರಂತರ ಸಂಪರ್ಕದಲ್ಲಿದ್ದಾರೆ. ಇದರಿಂದ ಬೇಸತ್ತು ವಿಷ ಸೇವಿಸಿದಾಗ ತಡೆಯದೇ ಸಾಯುವಂತೆ ಪ್ರೇರೇಪಿಸಿದ್ದಾರೆ. ಆನಂತರ ಇದು ವಿಷಪೂರಿತ ಆಹಾರ ಸೇವನೆಯಿಂದ ಆದ ಪ್ರಕರಣ ಎಂದು ಬದಲಿಸಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಂದನಾ ಅವರ ದೂರಿನ ಮೇರೆಗೆ ಮೈಸೂರಿನ ನಿವಾಸಿಯೂ ಆಗಿರುವ ಐಎಎಸ್ ಅಧಿಕಾರಿ ಆಕಾಶ್, ತಂದೆ ನಿವೃತ್ತ ಅಧಿಕಾರಿ ಶಂಕರ್, ತಾಯಿ ಚಂದ್ರಿಕಾ ಹಾಗೂ ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಸಹೋದರ ವಿಕಾಸ್ ಶಂಕರ್ ವಿರುದ್ಧ ಪುಲಕೇಶಿ ಉಪವಿಭಾಗ ವ್ಯಾಪ್ತಿಯ ಪೂರ್ವ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊಳಚೆ ನೀರಿನಿಂದ ಮೀನುಗಳ ಮಾರಣಹೋಮ

ದೂರಿನ ಹಿನ್ನೆಲೆಯಲ್ಲಿ 488(ಎ), 323, 504, 506 ಅಡಿ ವರದಕ್ಷಿಣೆ ಕಿರುಕುಳ, ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಷಕರು ತಮ್ಮ ಮನೆಯಿಂದಲೇ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು: ಸ್ಪೀಕರ್ ಯು ಟಿ ಖಾದರ್

ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ....

ಖಾಸಗಿ ಮೀಸಲು: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವುದು ಬರೀ ಘೋಷಣೆಯೇ?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು...

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ...

ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ...