ಬೆಂಗಳೂರು | ಕೆಐಎನಲ್ಲಿ ₹55 ಲಕ್ಷ ಮೌಲ್ಯದ ಚಿನ್ನ ಅಕ್ರಮ ಸಾಗಾಟ: ಬಂಧನ​​

Date:

ಒಳಉಡುಪು ಮತ್ತು ಜೀನ್ಸ್‌ ಸೊಂಟದ ಪಟ್ಟಿಯ ನಡುವೆ ಚಿನ್ನದ ಪೇಸ್ಟ್‌ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ರಾಜ್ಯದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಕೊಡಗಿನ 24 ವರ್ಷದ ಯುವಕನೊಬ್ಬ ದುಬೈನಿಂದ ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486 ಮೂಲಕ ಡಿ.10 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪ್ರಯಾಣಿಕರನ್ನು ತಪಾಸಣೆ ಮಾಡುವ ವೇಳೆ, ಯುವಕನ ಮೇಲೆ ಅನುಮಾನಗೊಂಡ ಅಧಿಕಾರಿಗಳು ಯುವಕನನ್ನು ತಪಾಸಣೆ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಆತನ ಲಗೇಜ್ ತಪಾಸಣೆ ನಡೆಸಿದ್ದಾರೆ. ಬಳಿಕ ಯುವಕ ಧರಿಸಿದ್ದ ಕಪ್ಪು ಬಣ್ಣದ ಜೀನ್ಸ್ ಪರಿಶೀಲಿಸಿದಾಗ, ಸೊಂಟ ಭಾಗದಲ್ಲಿರುವ ಪಟ್ಟಿಯ ನಡುವೆ ಚಿನ್ನದ ಪೇಸ್ಟ್‌ ಅನ್ನು ಒಂದು ಬಿಳಿ ಬಣ್ಣದ ಚಿಕ್ಕ ಚೀಲದಲ್ಲಿ ಇಟ್ಟು ಹೋಲಿಗೆ ಹಾಕಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಪತ್ನಿಗೆ ಒತ್ತಾಯಿಸಿದ ಪತಿ ವಿರುದ್ಧ ದೂರು ದಾಖಲು

ತಪಾಸಣೆ ವೇಳೆ, ಯುವಕನಿಂದ ₹55 ಲಕ್ಷ ಮೌಲ್ಯದ 907ಗ್ರಾಂ ಚಿನ್ನದ ಪೇಸ್ಟ್ ಅನ್ನು ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಣೆ ಮತ್ತು ಕಸ್ಟಮ್ಸ್ ಸುಂಕ ವಂಚನೆಗಾಗಿ ಆತನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...