ಬೆಂಗಳೂರು | ಪ್ರಯಾಣಿಕರ ಸುರಕ್ಷತೆಗೆ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪಿಎಸ್‌ಡಿ ಅಳವಡಿಕೆ

Date:

Advertisements
  • ರಾಜ್ಯದಲ್ಲಿ ಪ್ರಥಮ ಬಾರಿಗೆ ಈ ಪ್ಲ್ಯಾಟ್‌ಫಾರಂನಲ್ಲಿ ಸ್ಕ್ರೀನ್‌ ಡೋರ್‌ ಅಳವಡಿಕೆ
  • ಶನಿವಾರ ಕೆಂಗೇರಿ-ಚಲ್ಲಘಟ್ಟ ನಡುವೆ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಪ್ಲ್ಯಾಟ್‌ಫಾರಂ ಸ್ಕ್ರೀನ್‌ ಡೋರ್‌ (ಪಿಎಸ್‌ಡಿ) ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್) ಮುಂದಾಗಿದೆ.

ಪ್ಲ್ಯಾಟ್‌ಫಾರಂಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹಾಗೂ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವುದನ್ನು ತಡೆಯಲು ಈ ಪಿಎಸ್‌ಡಿ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.  

ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಬಳಿ ನಿರ್ಮಿಸುತ್ತಿರುವ (ಹಳದಿ ಮಾರ್ಗ) ಮೆಟ್ರೋ ನಿಲ್ದಾಣಕ್ಕೆ ಇನ್ಫೋಸಿಸ್ ಫೌಂಡೇಶನ್ ದೇಣಿಗೆಯಿಂದ ಪ್ಲ್ಯಾಟ್‌ಫಾರಂ ಸ್ಕ್ರೀನ್‌ಡೋರ್‌ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ. ಸದ್ಯ ನಗರದಲ್ಲಿ 63 ಮೆಟ್ರೋ ನಿಲ್ದಾಣಗಳಿವೆ.

Advertisements

ರಾಜ್ಯದಲ್ಲಿ ಪ್ರಥಮ ಬಾರಿಗೆ ಈ ಪ್ಲ್ಯಾಟ್‌ಫಾರಂನಲ್ಲಿ ಸ್ಕ್ರೀನ್‌ ಡೋರ್‌ (ಪಿಎಸ್‌ಡಿ) ಅಳವಡಿಸಲಾಗುತ್ತಿದೆ. ಈಗಾಗಲೇ ಕೋನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ ಕಾಮಗಾರಿ ಮುಕ್ತಾಯದ‌ ಹಂತ ತಲುಪಿದ್ದು, ಈ ವರ್ಷಾಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಧ್ಯರಾತ್ರಿ ಬೈಕ್‌ಗೆ ಡಿಕ್ಕಿ ಹೊಡೆದು ದರೋಡೆಗೈದ ದುಷ್ಕರ್ಮಿಗಳು

ಕೆಂಗೇರಿ–ಚಲ್ಲಘಟ್ಟ ನಡುವೆ ನಮ್ಮ ಮೆಟ್ರೋ ಪ್ರಾಯೋಗಿಕ ಸಂಚಾರ

ಕಳೆದ ಮೂರು ದಿನಗಳ ಹಿಂದೆ ಕೆ ಆರ್‌ ಪುರ – ಬೈಯಪ್ಪನಹಳ್ಳಿ ನಡುವೆ ನಮ್ಮ ಮೆಟ್ರೋ ಪ್ರಾಯೋಗಿಕ ಸಂಚಾರ ನಡೆಸಿತ್ತು. ಇದೀಗ ಶನಿವಾರ ಕೆಂಗೇರಿ-ಚಲ್ಲಘಟ್ಟ ನಡುವೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿದೆ.

ನೇರಳೆ ಮಾರ್ಗದ 1.9 ಕಿ.ಮೀ ಉದ್ದದ ಕೆಂಗೇರಿ – ಚಲ್ಲಘಟ್ಟ ಮಾರ್ಗದಲ್ಲಿ ನಿಧಾನವಾಗಿ ಪ್ರಾಯೋಗಿಕ ಚಾಲನೆ ಆರಂಭಿಸಿದೆ. ಈ ವೇಳೆ, ಮೆಟ್ರೋ ರೈಲಿನಲ್ಲಿ ಅಧಿಕಾರಿಗಳ ತಂಡ ಕೂಡ ಪ್ರಯಾಣ ಬೆಳೆಸಿದೆ. ಮೊದಲು ರೈಲು ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 11.27 ಕ್ಕೆ ಹೊರಟು ಸುಮಾರು 12 ನಿಮಿಷಗಳಲ್ಲಿ ಚೆಲ್ಲಘಟ್ಟ ಮೆಟ್ರೋ ನಿಲ್ದಾಣವನ್ನು ತಲುಪಿದೆ. ಸಂಜೆ 4.15ರವರೆಗೆ ಪ್ರಾಯೋಗಿಕ ಸಂಚಾರ ನಡೆಸಿದ್ದು, ರೈಲು ಐದು ಸುತ್ತು ಸುತ್ತಿ ಒಟ್ಟು 18 ಕಿ.ಮೀ ಕ್ರಮಿಸಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಪ್ರಾಯೋಗಿಕ ಚಾಲನೆಯಲ್ಲಿ ಬಿಎಂಆರ್‌ಸಿಎಲ್ ರೈಲು ಮಹಡಿ ಮತ್ತು ವಯಾಡಕ್ಟ್ ವಾಕ್‌ ವೇ ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರ ಅಳೆಯುವುದು ಹಾಗೂ ರೈಲಿನ ಹೊರೆ-ಸಾಗಿಸುವ ಸಾಮರ್ಥ್ಯ ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಪರಿಶೀಲಿಸಿದೆ. ನೇರಳೆ ಮಾರ್ಗದ ರೇಕ್‌ಗಳ ಕೊರತೆಯಿಂದಾಗಿ ಪ್ರಾಯೋಗಿಕ ಚಾಲನೆಗಾಗಿ ಹಸಿರು ಮಾರ್ಗದ ಲೈನ್‌ ಅನ್ನು ಬಳಸಬೇಕಾಯಿತು” ಎಂದು ಹೇಳಿದೆ.

“ಈಗಿರುವ ವ್ಯವಸ್ಥೆಯನ್ನು ಪರೀಕ್ಷಿಸಲು, ತಿದ್ದುಪಡಿ ಮಾಡಲು ಹಾಗೂ ರೈಲು ಅಂತರವನ್ನು ಸರಿಯಾದ ಕ್ರಮಕ್ಕೆ ತರಲು ಮುಂದಿನ ಕೆಲವು ವಾರಗಳಲ್ಲಿ ಹೆಚ್ಚಿನ ಪ್ರಾಯೋಗಿಕ ಸಂಚಾರ ನಡೆಸಲಾಗುವುದು. ಲೈನ್‌ನ ಪರಿಶೀಲನೆಗಾಗಿ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರನ್ನು (ಸಿಎಂಆರ್‌ಎಸ್) ಆಹ್ವಾನಿಸುವ ಮೊದಲು ಹೆಚ್ಚಿನ ವೇಗದ ಪರೀಕ್ಷೆ ಸಹ ನಡೆಸಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ಪ್ರಾಯೋಗಿಕ ಸಂಚಾರ

“ಕೆಂಗೇರಿ-ಚೆಲ್ಲಘಟ್ಟ ಮಾರ್ಗವು ನೇರಳೆ ಮಾರ್ಗದ ರೀಚ್ 2 ವಿಸ್ತರಣೆಯ ಭಾಗವಾಗಿದೆ. ಬೆಂಗಳೂರು ಮೆಟ್ರೋವನ್ನು ಪಶ್ಚಿಮಕ್ಕೆ ವಿಸ್ತರಿಸಲಾಗುತ್ತಿದೆ. ನೈಸ್ ರಸ್ತೆ ಮತ್ತು ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ ಪ್ರಾರಂಭವಾಗುವ ಸ್ಥಳದ ನಂತರ ಚೆಲ್ಲಘಟ್ಟ ಮೆಟ್ರೋ ನಿಲ್ದಾಣವು ಮೈಸೂರು ರಸ್ತೆಯ ಉದ್ದಕ್ಕೂ ಇದೆ” ಎಂದಿದ್ದಾರೆ.

ಬೈಯಪ್ಪನಹಳ್ಳಿ – ಕೆ. ಆರ್. ಪುರ ಮತ್ತು ಕೆಂಗೇರಿ – ಚೆಲ್ಲಘಟ್ಟ ಎರಡೂ ಮಾರ್ಗಗಳನ್ನು ಆಗಸ್ಟ್ ಅಂತ್ಯದ ವೇಳೆಗೆ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X