ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ; ಬಿಜೆಪಿ ಕಾರ್ಯಕರ್ತರ ಬಂಧನ

Date:

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು ಸಂಘಟನೆಗಳು ಸೇರಿ ‘ಬೆಂಗಳೂರು ಬಂದ್‌’ ನಡೆಸಿದ್ದವು. ಈ ವೇಳೆ, ಪ್ರತಿಭಟನೆ ಹೆಸರಿನಲ್ಲಿ ಕೆಲವು ಕೀಡೀಗೇಡಿಗಳು ಜಯನಗರದ ಹೋಟೆಲ್‌ವೊಂದಕ್ಕೆ ನುಗ್ಗಿ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಪೊಲೀಸ್ ತನಿಖೆ ವೇಳೆ, ಬಂಧಿತ ಇಬ್ಬರು ಆರೋಪಿಗಳು ಬಿಜೆಪಿ ಕಾರ್ಯಕರ್ತರಾಗಿದ್ದು, ಜಯನಗರ ಶಾಸಕ ರಾಮಮೂರ್ತಿ ಕಡೆಯವರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಂಗಳೂರು ಬಂದ್ ದಿನ ನಗರದ ಜಯನಗರ ಉಡುಪಿ ಹಬ್‌ಗೆ 8ಕ್ಕೂ ಹೆಚ್ಚು ಜನ ಹೋಟೆಲ್‌ಗೆ ನುಗ್ಗಿ ಗ್ಲಾಸ್, ಪೀಠೋಪಕರಣಗಳನ್ನು ಒಡೆದು ಹಾಕಿದ್ದರು. ಬೆಂಗಳೂರು ಬಂದ್ ಇದ್ದರೂ ಕೂಡ ಹೋಟೆಲ್ ಬಾಗಿಲು ಮುಚ್ಚಿಲ್ಲ ಎಂದು ಹೋರಾಟದ ಹೆಸರಿನಲ್ಲಿ ಬಂದ ವ್ಯಕ್ತಿಗಳು ಈ ಕೃತ್ಯ ನಡೆಸಿದ್ದರು. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಘಟನೆ ನಡೆದ ದಿನ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ ಕೀಡಿಗೇಡಿಗಳು

ಈ ಕುರಿತು ಹೋಟೆಲ್​ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸದ್ಯ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...