ಬೆಂಗಳೂರು | ಮೆಟ್ರೋ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳ: ಭದ್ರತೆಗಾಗಿ 326 ಹೆಚ್ಚುವರಿ ಸಿಬ್ಬಂದಿ ನಿಯೋಜನೆ

Date:

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಯತ್ನ ಹಾಗೂ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ನಿರ್ಧಾರ ಮಾಡಿದೆ.

- Advertisement -

ನಮ್ಮ ಮೆಟ್ರೋದಲ್ಲಿ ಉಂಟಾಗುತ್ತಿರುವ ಅವಘಡಗಳನ್ನು ತಡೆಯಲು ಶೀಘ್ರದಲ್ಲಿಯೇ ಹೆಚ್ಚುವರಿಯಾಗಿ 326 ಸಿಬ್ಬಂದಿಯನ್ನು ಬಿಎಂಆರ್​ಸಿಎಲ್ ನಿಯೋಜಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರೈಲುಗಳು ಸಂಚರಿಸುವಾಗ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು, ಪ್ರಯಾಣಿಕರ ಚಲನವಲನದ ಮೇಲೆ ನಿಗಾ ಇಡಲು, ರೈಲುಗಳ ಆಗಮನದ ಮೊದಲು ಪ್ರಯಾಣಿಕರನ್ನು ಸರದಿ ಸಾಲಿನಲ್ಲಿ ನಿಲ್ಲಿಸುವುದು, ಹಳದಿ ಗೆರೆ ದಾಟದಂತೆ ನೋಡಿಕೊಳ್ಳುವುದು ಭದ್ರತಾ ಸಿಬ್ಬಂದಿ ಕೆಲಸವಾಗಿದೆ.

ಅವಘಡ ತಡೆಯಲು ಶೀಘ್ರದಲ್ಲೇ ಒಂಬತ್ತು ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ‌ ನಿಯೋಜನೆ ಮಾಡಲಾಗುತ್ತಿದೆ.

ನಮ್ಮ ಮೆಟ್ರೊ ಎಂಟು ಭೂಗತ ನಿಲ್ದಾಣ ಸೇರಿದಂತೆ 65 ನಿಲ್ದಾಣಗಳನ್ನು ಹೊಂದಿದೆ. ಅಲ್ಲದೆ, ಅವುಗಳಲ್ಲಿ ಯಾವುದೂ ಪ್ಲಾಟ್‌ಫಾರ್ಮ್ ಪರದೆಯ ಬಾಗಿಲು ಅಥವಾ ಗೇಟ್‌ಗಳನ್ನು ಹೊಂದಿಲ್ಲ. ಹೆಚ್ಚುವರಿ ಸಿಬ್ಬಂದಿ ನೇಮಕದ ಜತೆಗೆ ಪ್ಲಾಟ್‌ಫಾರಂ ಸ್ಟ್ರೀನ್‌ ಡೋರ್ (ಪಿಎಸ್‌ಡಿ) ಅಳವಡಿಸಲು ಚಿಂತನೆ ನಡೆದಿದ್ದು, ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪ್ಲಾಟ್ ಫಾರ್ಮ್ ಸ್ಟ್ರೀನ್ ಡೋರ್​ಗೆ (ಪಿಎಸ್‌ಡಿ) ಟೆಂಡರ್ ಕರೆಯಲಾಗಿದ್ದು, ಅಲ್‌ಸ್ಟಾಮ್ ಟ್ರಾನ್ಸ್ ಪೋರ್ಟ್ ಇಂಡಿಯಾ ಈ ಟೆಂಡರ್ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಲ್ಡರ್ ಅಪಹರಿಸಿ ಕಿರುಕುಳ ನೀಡಿದ 8 ಜನರ ವಿರುದ್ಧ ಎಫ್ಐಆರ್ ದಾಖಲು

ಸುರಕ್ಷತೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬಿಎಂಆರ್‌ಸಿಎಲ್‌, ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್‌ ಡೋರ್‌ (ಪಿಎಸ್‌ಡಿ) ಅಳವಡಿಸಲು ಮುಂದಾಗಿದೆ.

ಪಿಎಸ್‌ಡಿ ಅಳವಡಿಕೆಗೆ ₹857 ಕೋಟಿ ಬಿಡ್​ಗೆ ಟೆಂಡರ್ ಅಂತಿಮವಾಗಿದೆ. ಪಿಎಸ್‌ಡಿಯನ್ನೂ 13 ಅಂಡರ್ ಗ್ರೌಂಡ್ ಹಾಗೂ 37 ಎಲಿವೇಟೆಡ್‌ ನಿಲ್ದಾಣಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...