ಬೆಂಗಳೂರು | ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ: ಸಹಾಯವಾಣಿ ಆರಂಭಿಸಿದ ಪೊಲೀಸ್ ಇಲಾಖೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಪ್ರಕರಣಗಳನ್ನು ತಡೆಗಟ್ಟಲು ಇದೀಗ ಬೆಂಗಳೂರು ನಗರ ಆಗ್ನೇಯ ವಿಭಾಗದ ಪೊಲೀಸರು ವೀ ಕೇರ್ ಸಹಾಯವಾಣಿ ಆರಂಭಿಸಿದ್ದು, ಇದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

ವೀ ಕೇರ್ ಎಂಬ ಸಹಾಯವಾಣಿ ಸಂಖ್ಯೆ 8277946600 ಕರೆ ಮಾಡಿ ಜನರು ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತುಕತೆ ನಡೆಸಿ ಪರಿಹಾರ ಕಂಡುಕ್ಕೊಳ್ಳಬಹುದಾಗಿದೆ. ಬೆಂಗಳೂರಿನಲ್ಲಿ ಹೊರ ರಾಜ್ಯದ ಜನರು ವಾಸ ಮಾಡುತ್ತಿರುವುದರಿಂದ ಬೇರೆ ಭಾಷೆಗಳಲ್ಲಿ ಮಾತುಕತೆ ನಡೆಸಬಹುದಾಗಿದೆ.

“ಸಂಕಷ್ಟದಲ್ಲಿ ಇರುವವರಿಗೆ ಅಥವಾ ನೋವಲ್ಲಿ ಇರುವವರಿಗೆ ಸಕಾಲದಲ್ಲಿ ನೆರವು ಅಥವಾ ಧೈರ್ಯ ನೀಡಿದರೆ ಇಂತಹ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಬಹುದು. ನಗರದಲ್ಲಿ ಜನವರಿಯಿಂದ ಅಕ್ಟೋಬರ್‌ವರೆಗೆ 1,967 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಸಂಕಷ್ಟದಲ್ಲಿ ಇರುವವರು ಅಥವಾ ಪೋಷಕರು ಅಥವಾ ಸಂಬಂಧಿಕರು ಸಹಾಯಕ್ಕಾಗಿ ವೀ ಕೇರ್ ಸಹಾಯವಾಣಿಗೆ ಕರೆ ಮಾಡಬಹುದು ಅಥವಾ ವಾಟ್ಸ್​ಆ್ಯಪ್ ಮೂಲಕವೂ ಸಂಪರ್ಕ ಮಾಡಬಹುದು. ಜನರು ತಮ್ಮ ಸಂಕಟ ಮತ್ತು ನೋವನ್ನು ವೀ ಕೇರ್ ಸಹಾಯವಾಣಿಗೆ ಕರೆ ಮಾಡಿ ಹಂಚಿಕೊಳ್ಳಬಹುದಾಗಿದೆ. ಒತ್ತಡ ಮತ್ತು ಆತಂಕ ಎಲ್ಲ ವಯೋಮಾನದವರ ಮೇಲೆ ಪರಿಣಾಮ ಬೀರುತ್ತದೆ” ಎಂದು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಸಿ.ಕೆ.ಬಾಬಾ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ರಾಫಿಕ್ ಸಿಗ್ನಲ್‌ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ; ಇಬ್ಬರ ಬಂಧನ

ಮಾನಸಿಕವಾಗಿ ಸವಾಲಿನ ಸಂದರ್ಭಗಳು ಮತ್ತು ಆತಂಕವನ್ನು ನಿಭಾಯಿಸಲು ಪೊಲೀಸ್ ಇಲಾಖೆಯ 50 ಮಹಿಳಾ ಸಿಬ್ಬಂದಿ ನಿಮ್ಹಾನ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ.

ಜನರು ಕರೆ ಮಾಡಿದಾಗ ವೀ ಕೇರ್ ಸಿಬ್ಬಂದಿ ಫೋನ್ ಮೂಲಕ ಸಮಸ್ಯೆ ಪರಿಹಾರ ಮಾಡುತ್ತಾರೆ. ನಂತರದಲ್ಲಿ ಪರಿಸ್ಥಿತಿಯನ್ನು ನಿರ್ಣಯಿಸಿದ ನಂತರ ಚಿಕಿತ್ಸೆ ಪಡೆಯಲು ಸಹಾಯ ಮಾಡುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X