ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ; ಗಡುವು ವಿಸ್ತರಣೆ ಸಾಧ್ಯತೆ

Date:

2019ರ ಏಪ್ರಿಲ್‌ಗಿಂತ ಮೊದಲು ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವು (ನವೆಂಬರ್ 17) ಸಮೀಪಿಸುತ್ತಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಕೋಟಿಯಷ್ಟು ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ.10 ಕ್ಕಿಂತ ಕಡಿಮೆ) ವಾಹನಗಳು ಮಾತ್ರ ತಮ್ಮ ಫಲಕಗಳನ್ನು ನವೀಕರಿಸಿವೆ ಎನ್ನಲಾಗಿದೆ.

- Advertisement -

ಎಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ರಾಜ್ಯ ಸರ್ಕಾರ ವಿಸ್ತರಿಸುವ ಸಾಧ್ಯತೆಯಿದ್ದು, ನಂಬರ್‌ ಪ್ಲೇಟ್ ಅಳವಡಿಕೆಗೆ ಜನರನ್ನು ಉತ್ತೇಜಿಸಲು ವ್ಯಾಪಕ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು‌ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಎಂಒಆರ್‌ಟಿಎಚ್) ಭದ್ರತೆ ಸೇರಿದಂತೆ ಹಲವು ಕಾರಣಗಳಿಗಾಗಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಂಟಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದ ಬಳಿಕ ತೆಗೆದುಹಾಕಲು ಸಾಧ್ಯವಿಲ್ಲ. ಅವುಗಳನ್ನು ರಿವಿಟ್‌ಗಳನ್ನು ಬಳಸಿ ಅಳವಡಿಸುವುದರಿಂದ ಪ್ಲೇಟನ್ನು ಮುರಿಯಬೇಕಾಗುತ್ತದೆ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಯಾವುದೇ ಅವಕಾಶ ಇರುವುದಿಲ್ಲ. 2019ರ ಏಪ್ರಿಲ್ 1ಕ್ಕಿಂತ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಏಪ್ರಿಲ್ 2019 ರ ನಂತರ ನೋಂದಾಯಿಸಿರುವ ಎಲ್ಲ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅ.31ರಂದು ಮಲೆನಾಡು-ಕರಾವಳಿ ಸಮಸ್ಯೆಗಳ ಸಮಾಲೋಚನೆ ಸಭೆ

“ರಾಜ್ಯ ಸರ್ಕಾರದ ಅಧಿಸೂಚನೆಯು ಹಳೆಯ ವಾಹನಗಳು ಸಾಲಿನಲ್ಲಿ ಬರಲು ನವೆಂಬರ್ 17 ರವರೆಗೆ ಗಡುವು ನೀಡಿದ್ದರೂ, ಪ್ರತಿಕ್ರಿಯೆ ನೀರಸವಾಗಿದೆ. ಜನರನ್ನು ಉತ್ತೇಜಿಸಲು ನಾವು ಅಧಿಸೂಚನೆಯ ವ್ಯಾಪಕ ಪ್ರಚಾರವನ್ನು ಯೋಜಿಸುತ್ತಿದ್ದೇವೆ. ಆದರೆ ಕೆಲವರು ಈ ವಿಷಯವನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದರಿಂದ, ನೋಂದಣಿ ಫಲಕಗಳನ್ನು ಸರಿಪಡಿಸಲು ಮೂಲ ಉಪಕರಣ ತಯಾರಕರಿಂದ (ಒಇಎಂ) ಅಧಿಕಾರ ಪಡೆದ ಎಚ್‌ಎಸ್‌ಆರ್‌ಪಿ ತಯಾರಕರಿಗೆ ಮಾತ್ರ ಅನುಮತಿ ನೀಡುವುದರ ವಿರುದ್ಧ ವಾದಿಸಿದ್ದರಿಂದ ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಹಾಗಾಗಿ ಸರ್ಕಾರವು ಪುನಃ ನಂಬರ್‌ ಪ್ಲೇಟ್‌ ಅಳವಡಿಕೆಯ ಗಡುವನ್ನು ವಿಸ್ತರಿಸಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...