ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿವೆ.
ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 379 (ಕಳ್ಳತನಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ಅನ್ನು ಸಂಪರ್ಕಿಸುವ ಮಲ್ಟಿ–ಮೋಡಲ್ ಟ್ರಾನ್ಸ್ಪೋರ್ಟೇಶನ್ ಹಬ್ ಅನ್ನು ನಿರ್ಮಿಸಲು ವಿಮಾನ ನಿಲ್ದಾಣದ ಆವರಣದಲ್ಲಿ ₹3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್ಗಳನ್ನು ಇರಿಸಲಾಗಿತ್ತು. ಇದೀಗ ಇವು ನಾಪತ್ತೆಯಾಗಿವೆ ಎಂದು ದೂರು ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಕಿಲ್ ಡಿಕೆ ಬ್ರದರ್ಸ್’ ಎಂದು ಪೋಸ್ಟ್ ಹಾಕಿದ್ದವನ ಬಂಧನ
ಫೆಬ್ರವರಿ 20, 2020ರಿಂದ ವಿಮಾನ ನಿಲ್ದಾಣದಲ್ಲಿ ಕೆಲವು ಕೆಲಸಗಳನ್ನು ನಿರ್ವಹಿಸಿದ ನಂತರ, ಇತರ ಕೆಲಸಗಳಿಗಾಗಿ ಡಿಸೆಂಬರ್ 2022ರಿಂದ ಆವರಣದೊಳಗೆ ಉಳಿದ ನಿರ್ಮಾಣ ಸಾಮಗ್ರಿಗಳನ್ನು ಇರಿಸಲಾಗಿದೆ. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ, ಸಾಮಾನುಗಳು ಕಾಣೆಯಾಗಿರುವುದು ತಿಳಿದುಬಂದಿದೆ.
ವಸ್ತುಗಳು ಕಾಣೆಯಾಗಿರುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಈ ಬಗ್ಗೆ ತಿಳಿದಿರಲಿಲ್ಲ ಎಂದು ಎಫ್ಐಆರ್ ದಾಖಲಾಗಿದೆ.