ಬೆಂಗಳೂರು | ಕೆಐಎ ಟರ್ಮಿನಲ್ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಮೌಲ್ಯದ ವಸ್ತುಗಳು ಕಳವು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿವೆ.

- Advertisement -

ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 379 (ಕಳ್ಳತನಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ಅನ್ನು ಸಂಪರ್ಕಿಸುವ ಮಲ್ಟಿ–ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಲು ವಿಮಾನ ನಿಲ್ದಾಣದ ಆವರಣದಲ್ಲಿ ₹3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳನ್ನು ಇರಿಸಲಾಗಿತ್ತು. ಇದೀಗ ಇವು ನಾಪತ್ತೆಯಾಗಿವೆ ಎಂದು ದೂರು ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಕಿಲ್​ ಡಿಕೆ ಬ್ರದರ್ಸ್’​​ ಎಂದು ಪೋಸ್ಟ್‌ ಹಾಕಿದ್ದವನ ಬಂಧನ

ಫೆಬ್ರವರಿ 20, 2020ರಿಂದ ವಿಮಾನ ನಿಲ್ದಾಣದಲ್ಲಿ ಕೆಲವು ಕೆಲಸಗಳನ್ನು ನಿರ್ವಹಿಸಿದ ನಂತರ, ಇತರ ಕೆಲಸಗಳಿಗಾಗಿ ಡಿಸೆಂಬರ್ 2022ರಿಂದ ಆವರಣದೊಳಗೆ ಉಳಿದ ನಿರ್ಮಾಣ ಸಾಮಗ್ರಿಗಳನ್ನು ಇರಿಸಲಾಗಿದೆ. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ, ಸಾಮಾನುಗಳು ಕಾಣೆಯಾಗಿರುವುದು ತಿಳಿದುಬಂದಿದೆ.

ವಸ್ತುಗಳು ಕಾಣೆಯಾಗಿರುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಈ ಬಗ್ಗೆ ತಿಳಿದಿರಲಿಲ್ಲ ಎಂದು ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...