ಬೆಂಗಳೂರು | ಕೂಡಲೇ 56,432 ಹುದ್ದೆಗಳ ಅಧಿಸೂಚನೆಗೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಆಗ್ರಹ

Date:

56,432 ಹುದ್ದೆಗಳ ಅಧಿಸೂಚನೆಯನ್ನು ಕೂಡಲೇ ಹೊರಡಿಸಲು ಹಾಗೂ KPSC ಸ್ವಚ್ಛಗೊಳಿಸಲು ಪಿ ಸಿ ಹೋಟಾ ಸಮಿತಿ ವರದಿ ಜಾರಿಗೊಳಿಸಲು ಅಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೆಂಗಳೂರು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

“ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ರಾಜ್ಯಾದ್ಯಂತ ನಿರಂತರವಾಗಿ ರಾಜ್ಯ ಹಾಗೂ ಕೇಂದ್ರದಲ್ಲಿ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕಾಯಂ ಹಾಗೂ ಪಾರದರ್ಶಕ ನೇಮಕಾತಿಗಾಗಿ ಆಗ್ರಹಿಸಿ ಹೋರಾಟಗಳನ್ನು ಬೆಳೆಸುತ್ತ ಬಂದಿದೆ. ಎಲ್ಲ ಹೋರಾಟಗಳ ಪ್ರತಿಫಲವಾಗಿ ರಾಜ್ಯಸರ್ಕಾರವು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿತ್ತು. ನಂತರವೂ ವಿವಿಧ ಇಲಾಖೆಗಳ ಸಚಿವರು ಅತೀ ಶೀಘ್ರದಲ್ಲಿ ನೇಮಕಾತಿ ಮಾಡುತ್ತೇವೆಂದು ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವುದು ಉದ್ಯೋಗಾಕಾಂಕ್ಷಿಗಳಿಗೆ ಭ್ರಮನಿರಸನ ಉಂಟುಮಾಡಿದೆ. ಈ ಘೋಷಣೆ ಮಾಡಿ ಐದು ತಿಂಗಳುಗಳು ಕಳೆದಿದ್ದರೂ ಈವರೆಗೂ ಯಾವುದೇ ನೇಮಕಾತಿಗಳಿಗೆ ಅಧಿಸೂಚನೆಗಳನ್ನು ಹೊರಡಿಸಿಲ್ಲ. ಆದ್ದರಿಂದ ಉದ್ಯೋಗಾಕಾಂಕ್ಷಿಗಳು ಸರ್ಕಾರದ ಘೋಷಣೆಗಳನ್ನು ನಂಬಲು ಸಾಧ್ಯವಾಗದೆ, ವಿಶ್ವಾಸ ಕಳೆದುಕೊಂಡು ಮತ್ತೆ ಹೋರಾಟ ಮುಂದುವರೆಸಲಾಗಿದೆ” ಎಂದು ಸಮಿತಿಯು ತಿಳಿಸಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆಯೂ ವರದಿಗಳು ಬಂದಿದ್ದು, ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ಹಿಂದೆಯೂ ಕೆಪಿಎಸ್‌ಸಿ ನಡೆಸಿದ ಹಲವಾರು ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರಗಳು ನಡೆದಿವೆ. ಆದ್ದರಿಂದ ಕೂಡಲೇ ಕೆಪಿಎಸ್‌ಸಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮುಂದಿನ ಎಲ್ಲ ನೇಮಕಾತಿಗಳು ಪಾರದರ್ಶಕವಾಗಿ ನಡೆಯುವಂತೆ ಖಾತ್ರಿಪಡಿಸಬೇಕು” ಎಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯು ಆಗ್ರಹಿಸಿತು.

ಉದ್ಯೋಗಾಕಾಂಕ್ಷಿ ಹೋರಾಟ ಸಮಿತಿ

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯು ಮೇ 7 ಮತ್ತು 8ರಂದು ರಾಜ್ಯವ್ಯಾಪಿ ಹೋರಾಟ ನಡೆಸಿದ್ದು, ಕೂಡಲೇ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ರಾಜ್ಯಸರ್ಕಾರಕ್ಕೆ ಒತ್ತಾಯಿಸಿದೆ.

ಹಕ್ಕೊತ್ತಾಯಗಳು

  1. ರಾಜ್ಯಸರ್ಕಾರ ತೀರ್ಮಾನಿಸಿದಂತೆ 56,432 ಹುದ್ದೆಗಳಿಗೆ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು.
  2. ಎಲ್ಲ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಹಾಗೂ ಪಾರದರ್ಶಕ ನೇಮಕಾತಿಗಾಗಿ ಕೆಪಿಎಸ್‌ಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಪಿ ಸಿ ಹೋಟಾ ಸಮಿತಿಯ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು.
  3. ಎಲ್ಲ ನೇಮಕಾತಿಗಳ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಒದಗಿಸಬೇಕು.
  4. ರಾಜ್ಯದಲ್ಲಿ ಎಲ್ಲ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು.
  5. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕು.
  6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ಕಾರಿ ಉದ್ಯೋಗಗಳ ಮೇಲಿನ ಅನುದಾನ ಕಡಿಮೆ ಮಾಡಲು, ತನ್ಮೂಲಕ ಉದ್ಯೋಗ ಕಡಿತಗೊಳಿಸಲು ಪ್ರಮುಖ ಕಾರಣವಾಗಿರುವ FRBM ಕಾಯ್ದೆ-2003ನ್ನು ರದ್ದುಗೊಳಿಸಬೇಕು.
  7. ಬಜೆಟ್‌ನಲ್ಲಿ ಘೋಷಿಸಿದಂತೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಜಯನಗರ, ಸಪ್ತಾಪುರ, ಶ್ರೀನಗರ, ಕಲ್ಯಾಣನಗರ ಭಾಗದಲ್ಲಿ ಕೂಡಲೇ ಇಂದಿರಾ ಕ್ಯಾಂಟೀನ್ ತೆರೆಯಬೇಕು.
  8. ಧಾರವಾಡ, ಬೆಂಗಳೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಪ್ರದೇಶಗಳಲ್ಲಿರುವ ಹೋಟೆಲ್‌ಗಳು, ಖಾನಾವಳಿಗಳು, ಉಪಹಾರ ಮಂದಿರಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ಒದಗಿಸುವುದನ್ನು ಖಾತ್ರಿಪಡಿಸಲು ಸಂಬಂಧಪಟ್ಟ ಇಲಾಖೆ ಸೂಕ್ತ ನಿಗಾ ವಹಿಸಬೇಕು.

ಈ ಸುದ್ದಿ ಓದಿದ್ದೀರಾ? ಗದಗ | ನಿಯಮಗಳನ್ನು ಮೀರಿ ಡೊನೇಷನ್ ವಸೂಲಿ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

ನಿಯೋಗದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕ ಕೃಷ್ಣ, ಜಿಲ್ಲಾ ಸಂಚಾಲಕಿ ಕಲಾವತಿ, ಉದ್ಯೋಗಾಕಾಂಕ್ಷಿಗಳಾದ ಸಿದ್ದೇಶ, ಪ್ರಜ್ವಲ್, ಮನೋಹರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...