ಬೆಂಗಳೂರು | ಬೆಳಿಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗುವಿನ ಅಪಹರಣ

Date:

ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಮಧ್ಯಾಹ್ನದ ವೇಳೆಗೆ ಅವರ ಮಗುವನ್ನು ಅಪಹರಿಸಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಶಫೀವುಲ್ಲಾ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಕರಣದ ಹಿನ್ನೆಲೆ:

ಶಫೀವುಲ್ಲಾ ಪತ್ನಿಯಿಂದ ವಿಚ್ಛೇದನ ಪಡೆದು ಮಗಳೊಂದಿಗೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿ ವಾಸವಾಗಿದ್ದರು. ಶಫೀವುಲ್ಲ ಅವರು ಫರ್ನಿಚರ್‌ ಶಾಪ್‌ ಇಟ್ಟುಕೊಂಡಿದ್ದರು. ಈ ಹಿಂದೆ ಈತ ಶಫೀವುಲ್ಲ ಅವರ ಫರ್ನೀಚರ್‌ ಶಾಪ್‌ನಲ್ಲಿ ಕೆಲಸಕ್ಕೆ ಸೇರಿದ್ದ ವಸೀಂ ಎಂಬಾತ ಕೇಲವೇ ದಿನಗಳಲ್ಲಿ ಕೆಲಸ ಬಿಟ್ಟಿದ್ದನು.

ಮತ್ತೆ ಮಾಲೀಕನಿಗೆ ಕೆಲಸ ಕೊಡಿ ಎಂದು ಅಂಗಲಾಚಿ ಕಣ್ಣೀರು ಹಾಕಿದ್ದನು. ಹೀಗಾಗಿ, ಮಾಲೀಕ ಆತನಿಗೆ ಮತ್ತೆ ಕೆಲಸ ಕೊಟ್ಟಿದ್ದರು. ಕೆಲಸಕ್ಕಾಗಿ ಆರೋಪಿ ವಸೀಂ ಎಂಬಾತ ಡಿಸೆಂಬರ್ 28ರ ಬೆಳಿಗ್ಗೆ ಕೆಲಸಕ್ಕೆ ಸೇರಿದ್ದನು. ಮಧ್ಯಾಹ್ನ ಶಫೀವುಲ್ಲ್ ಅವರ ನಾಲ್ಕು ವರ್ಷದ ಮಗುವಿಗೆ ಚಾಕಲೇಟ್‌ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ.

ಈ ಸುದ್ದಿ ಓದಿದ್ದೀರಾ? 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

“ಕೆಲಸಕ್ಕೆ ಸೇರಿದ ದಿನವೇ ಮಗುವಿಗೆ ಚಾಕಲೇಟ್‌ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ” ಎಂದು ಶಫೀವುಲ್ಲಾ ಆರೋಪಿಸಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಶಫೀವುಲ್ಲಾ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...