ಬೆಂಗಳೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಕುರಿತು ಕರವೇ ಬೃಹತ್ ರ‍್ಯಾಲಿ, ಸಂಚಾರ ಅಸ್ತವ್ಯಸ್ತ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬಹುತೇಕ ವಾಣಿಜ್ಯ ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕನಿಷ್ಠವಾಗಿದ್ದು, ಅನ್ಯ ಭಾಷೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಡಿಸೆಂಬರ್‌ 27ರಂದು ನಗರದಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ. ಬೆಂಗಳೂರು ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್​​ ಬಳಿಯ ಟೋಲ್​ ಪ್ಲಾಜಾದಿಂದ ಆರಂಭವಾಗುವ ರ‍್ಯಾಲಿ ಕಬ್ಬನ್ ಪಾರ್ಕ್ ವರೆಗೆ ಸಾಗಲಿದೆ.

- Advertisement -

ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ, ನೆಲದ ಭಾಷೆ. ಕರ್ನಾಟಕದ ಎಲ್ಲ ವ್ಯಾಪಾರ, ಉದ್ದಿಮೆಗಳ ನಾಮಫಲಕಗಳಲ್ಲಿ ಕನ್ನಡವೇ ಅಗ್ರಸ್ಥಾನ ಪಡೆಯಬೇಕು ಎಂಬ ಸರ್ಕಾರದ ನಿಯಮಾವಳಿಗಳು ಇದ್ದರೂ ಸಹ ಕೆಲವು ಉದ್ಯಮಿಗಳು, ವ್ಯಾಪಾರಸ್ಥರು ಕನ್ನಡದ ಅಸ್ಮಿತೆಯನ್ನು ಅಗೌರವದಿಂದ ಕಾಣುತ್ತ, ಕನ್ನಡದಲ್ಲಿ ನಾಮಫಲಕಗಳನ್ನು ಹಾಕದೇ ಉಡಾಫೆಯಿಂದ ವರ್ತಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಈ ಹಿನ್ನೆಲೆ, ಕರ್ನಾಟಕ ರಕ್ಷಣಾ ವೇದಿಕೆ ಕಳೆದ ನವೆಂಬರ್ 1ರಿಂದ ಸತತವಾಗಿ ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ನಡೆಸುತ್ತ ಬಂದಿದೆ. ಆದರೂ ಕೆಲವು ವಲಸಿಗ ವ್ಯಾಪಾರಸ್ಥರು ನಾಮಫಲಕ ಬದಲಿಸದ ಹಿನ್ನೆಲೆ ಡಿಸೆಂಬರ್ 27ರೊಳಗೆ ನಾಮಫಲಕ ಕನ್ನಡೀಕರಿಸಲು ಕರ್ನಾಟಕ ರಕ್ಷಣಾ ವೇದಿಕೆ ಗಡುವು ನೀಡಿತ್ತು. ಆದರೂ, ಇನ್ನು ಹಲವು ಅಂಗಡಿಗಳಲ್ಲಿ ಕನ್ನಡ ನಾಮಫಲಕ ಬಳಕೆ ಮಾಡಿಲ್ಲ.

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಕ್ಕೆ ಸರ್ಕಾರ ಸೂಚನೆ ನೀಡಿದೆ. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ನಾಮಫಲಕ ಮಹಾ ಅಭಿಯಾನ ಕೈಗೊಂಡಿದೆ. ಬುಧವಾರ ಬೆಳಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ಸಾವಿರಾರು ಕಾರ್ಯಕರ್ತರು ನಾಡಪ್ರಭು ಕೆಂಪೇಗೌಡರ ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ ಟೋಲ್ ಬಳಿ ಸಮಾವೇಶಗೊಂಡು, ಅಲ್ಲಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಿಂದ ರ‍್ಯಾಲಿ ಶುರುವಾಗಿದ್ದು, ಯಲಹಂಕ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಎಸ್‌ಪಿ ರೋಡ್, ಬ್ರಿಗೇಡ್ ರೋಡ್, ಎಮ್‌ಜಿ ರೋಡ್, ಚಿಕ್ಕ ಪೇಟೆ, ಸಿಟಿ ಮಾರ್ಕೆಟ್, ಅವಿನ್ಯೂ ರೋಡ್ ಮುಖಾಂತರ ಕಬ್ಬನ್ ಪಾರ್ಕ್ ವರೆಗೆ ಸಾಗಲಿದೆ.

ಕನ್ನಡಕ್ಕೆ ಶೇ.60 ರಷ್ಟು ಆದ್ಯತೆ ಕೊಡಬೇಕು ಎಂದು ಕರವೇ ನಾರಾಯಣಗೌಡ ಬಣ ಮಾಲ್, ಅಂಗಡಿ ಮಾಲೀಕರಿಗೆ ಎಚ್ಚರಿಕೆ ಕೊಟ್ಟಿದೆ. ಇನ್ನು ರ‍್ಯಾಲಿ ವೇಳೆ ಕನ್ನಡ ನಾಮಫಲಕ ಇಲ್ಲದ ಅಂಗಡಿ, ಉದ್ಯಮಗಳು ಕಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಈ ಸುದ್ದಿ ಓದಿದ್ದೀರಾ? ಡಿ.26 ರಂದು ಕರ್ನಾಟಕದಲ್ಲಿ 74 ಹೊಸ ಕೋವಿಡ್​ ಕೇಸ್ ಪತ್ತೆ: ಇಬ್ಬರು ಬಲಿ

ಪೊಲೀಸ್ ಬಿಗಿ ಭದ್ರತೆ

ರ‍್ಯಾಲಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಜತೆಗೆ ಈ ವೇಳೆ, ವಾಹನ ಸಂಚಾರ ದಟ್ಟಣೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ವಿಮಾನ ನಿಲ್ದಾಣ​ ರಸ್ತೆಯ ಡಿವೈಡರ್ ಬಳಿ ಸುಮಾರು 500 ಮೀಟರ್ ಗೂ ಅಧಿಕ ದೂರ ಸೈಡ್ ವಾಲ್ ಅಳವಡಿಕೆ ಮಾಡಿದ್ದಾರೆ.

ಜತೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಟೋಲ್ ಬಳಿ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 1 ಎಸಿಪಿ, 6 ಇನ್ಸ್​ಪೆಕ್ಟರ್, 12 ಸಬ್ ಇನ್ಸ್​ಪೆಕ್ಟರ್ ಸೇರಿದಂತೆ 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇನ್ನು ಬೆಂಗಳೂರಿನಲ್ಲಿ ರ‍್ಯಾಲಿ ನಡೆಸಲು ಅವಕಾಶವಿಲ್ಲದ ಹಿನ್ನೆಲೆ, ಪ್ರತಿಭಟನೆ ತೀವ್ರಗೊಳಿಸಿದರೆ ಕಾರ್ಯಕರ್ತರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ 10 ಬಸ್ ವ್ಯವಸ್ಥೆ ಮಾಡಿಕೊಂಡಿದ್ದಾರೆ.

“ಕರವೇ ಬೃಹತ್ ಜಾಥಾ ಇದ್ದು, ಈ ಹಿನ್ನೆಲೆ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...