ಬೆಂಗಳೂರು | ಮೈ ತುಂಬಾ ಕೆಜಿಗಟ್ಟಲೇ ಬಂಗಾರ ಹಾಕಿಕೊಂಡು ಹವಾ ಸೃಷ್ಟಿಸುತ್ತಿದ್ದ ಕಿಂಗ್ ಮೇಕರ್ ದಾಸ ಬಂಧನ

Date:

ಮೈ ತುಂಬಾ ಕೆಜಿಗಟ್ಟಲೇ ಬಂಗಾರದ ಒಡವೆ ಹಾಕಿಕೊಂಡು ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಕಿಂಗ್‌ ಮೇಕರ್ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಬೇರೊಬ್ಬರ ಆಸ್ತಿ ವಿಚಾರದಲ್ಲಿ ಮೂಗು ತೂರಿಸಿದ ಈತನನ್ನು ಯಲಹಂಕ ಪೊಲೀಸರು ಬಂಧಿಸಿದ್ದು, ಇದೀಗ ಕಂಬಿ ಎಣಿಸುತ್ತಿದ್ದಾನೆ.

ಹೌದು, ಮೈ ತುಂಬಾ ಬಂಗಾರದ ಒಡವೆ ಹಾಕಿಕೊಂಡು, ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ಓಡಾಡುವ ದಾಸ್ ಕಿಂಗ್ ಮೇಕರ್ ಎಂಬ ಹೆಸರಿನ ಈತ ನೆಗೆಟಿವ್ ಶೇಡ್‌ನಲ್ಲಿ ಜನಪ್ರಿಯತೆ ಗಳಿಸಲು ಮುಂದಾಗಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಿಳೆ ಮತ್ತು ಓರ್ವ ವ್ಯಕ್ತಿಯ ನಡುವೆ ಆಸ್ತಿಯ ವಿಚಾರದಲ್ಲಿ ಗಲಾಟೆ ನಡೆದಿದೆ. ಆ ವ್ಯಕ್ತಿ ದಾಸ್‌ನ ಬಳಿ ಬಂದು ಸಮಸ್ಯೆಯ ಬಗೆಹರಿಸಿಕೊಡುವಂತೆ ಕೇಳಿದ್ದಾನೆ. ಇದಕ್ಕೆ ದಾಸ ತನ್ನ ಸಹಚರರನ್ನು ಮಹಿಳೆಯ ಮನೆಗೆ ಕಳುಹಿಸಿ ಬೆದರಿಕೆ ಹಾಕಿಸಿದ್ದಾನೆ. ಅಲ್ಲದೇ, ಮಹಿಳೆಯ ಮೇಲೆ ಹಲ್ಲೆಯೂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

ಹಲ್ಲೆಗೊಳಗಾದ ಮಹಿಳೆ ದಾಸನ ಸಹಚರರು ಬಂದು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯಲಹಂಕ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ದೂರು ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ಪೊಲೀಸರು ದಾಸನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬೆದ್ರಕಟ್ಟೆಯ ಜನತಾ ಕಾಲೋನಿಗೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ‌ಶಿವಮೊಗ್ಗ...

ಕಲಬುರಗಿ | ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ...

ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ...