ಬೆಂಗಳೂರು | ಬೇಸಿಗೆಯಲ್ಲಿ ನೀರಿನ ಅಭಾವ, ವಾಹನ ತೊಳೆದರೂ ಬೀಳುತ್ತೆ 500 ರೂ. ದಂಡ!

Date:

ಬೆಂಗಳೂರಿನ ವಿವಿಧ ವಾರ್ಡ್‌ಗಳಲ್ಲಿ ಬೇಸಿಗೆಯಲ್ಲಿ ಅಂತರ್ಜಲ ಕುಸಿಯುವ ಸಾಧ್ಯತೆ ಇದ್ದು, ಇದರಿಂದ ನೀರಿನ ಅಭಾವ ಎದುರಾಗಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಬೆಂಗಳೂರು ಜಲ ಮಂಡಳಿ ಎಚ್ಚೆತ್ತುಕೊಂಡಿದ್ದು, ನೀರಿನ ದುರ್ಬಳಕೆ ತಡೆಗೆ ಮುಂದಾಗಿದೆ.

- Advertisement -

ರಾಜ್ಯದಲ್ಲಿ ಬೇಸಿಗೆ ಇನ್ನೂ ಆರಂಭವಾಗಿಲ್ಲ ಈಗಲೇ ಸುಡು ಬಿಸಿಲ ಧಗೆಗೆ ಜನ ಬಸವಳಿದು ಹೋಗುತ್ತಿದ್ದಾರೆ. ಅದರಲ್ಲಿ ಮಹಾನಗರ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಬೆಂಗಳೂರಿನಲ್ಲಿ ನೀರಿನ ಬಳಕೆಯ ಮೇಲೆ ಮಿತಿ ಹೇರಬೇಕು? ಅಂತರ್ಜಲ ದುರ್ಬಳಕೆಯಾಗದಂತೆ ಹೇಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಹಿನ್ನೆಲೆಯಲ್ಲಿ ಬೆಂಗಳೂರು ಜಲ ಮಂಡಳಿ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವ ಹಾಗೂ ಪೋಲು ಮಾಡುವುದನ್ನು ತಪ್ಪಿಸಲು ದಂಡನಾತ್ಮಕ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಜಲ ಮಂಡಳಿ ಹೊಸ ಆದೇಶ ಹೊರಡಿಸಿದ್ದು, ಕುಡಿಯುವ ನೀರನ್ನು ವಾಹನಗಳನ್ನು ತೊಳೆಯಲು ,ಕೈದೋಟಕ್ಕೆ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ನೆಲ ಸ್ವಚ್ಛತೆಗೆ ಬಳಸುವುದನ್ನು ನಿಷೇಧಿಸಿದೆ.

ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿ ಕುಡಿಯುವ ನೀರಿಗಲ್ಲದೇ, ಇತರೆ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಜಲಮಂಡಳಿ ಕಾಯ್ದೆಯ ಕಲಂ 109ರ ಅನ್ವಯ 500 ರೂ. ದಂಡ ವಿಧಿಸಲಾಗುವುದು. ಉಲ್ಲಂಘನೆ ಮರುಕಳಿಸಿದರೆ ದಂಡದ ಮೊತ್ತ 500 ರೂ.ಹಾಗೂ ಹೆಚ್ಚುವರಿಯಾಗಿ ಪ್ರತಿ ದಿನ 500 ರೂ. ದಂಡ ವಿಧಿಸುವುದಾಗಿ ಜಲ ಮಂಡಳಿ ಎಚ್ಚರಿಸಿದೆ.

ಆದೇಶ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಜಲಮಂಡಳಿಯ ಸಹಾಯವಾಣಿ 1916ಕ್ಕೆ ದೂರು ನೀಡಬಹುದು ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...