ಬೆಂಗಳೂರಿಗೆ ಉದ್ಯೋಗ ಅರಸಿ ಬರುತ್ತಿದ್ದ ಹಳ್ಳಿ ಹುಡುಗಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ಹಣ ಲಪಟಾಯಿಸಿ ಬ್ಯಾಂಕಾಕ್‌ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಕುಮಾರ್ (53) ಬಂಧಿತ ಆರೋಪಿ. ಹಳ್ಳಿ ಹುಡುಗಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಈತ ನೇರ ನೇಮಕಾತಿಯ ಮೂಲಕ ಎಫ್‌ಡಿಎ, ಎಸ್‌ಡಿಎ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದನು.
ಯುವತಿಯರಿಂದ ಲಕ್ಷಾಂತರ ಹಣ ಪಡೆದ ಬಳಿಕ ಅವರು ಕರೆ ಮಾಡಿದರೂ ಸ್ವೀಕರಿಸದೇ ಬ್ಯಾಂಕಾಕ್‌ಗೆ ತೆರಳುತ್ತಿದ್ದನು.
ಗಿರಿಜಾ ಎಂಬ ಯುವತಿಗೆ ಎಸ್‌ಡಿಎ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಮಾಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬಿಬಿಎಂಪಿ
ಬ್ಯಾಂಕಾಕ್ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್‌ನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.