ಬೆಂಗಳೂರು | ಭೂ ದರೋಡೆಕೋರರಿಗೆ ಪ್ರವೇಶವಿಲ್ಲ; ಹೆಮ್ಮಿಗೆಪುರ ನಿವಾಸಿಗಳ ಸಂಕಲ್ಪ

Date:

Advertisements

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಬೆಂಗಳೂರಿನ ಹೆಮ್ಮಿಗೆಪುರ ವಾರ್ಡ್ ನಿವಾಸಿಗಳು ಸಂಕಲ್ಪ ಮಾಡಿದ್ದಾರೆ. ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಭೂಗಳ್ಳತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಮ್ಮಿಗೆಪುರದ ಮಂತ್ರಿ ಕೋರ್ಟ್ ಯಾರ್ಡ್‌ನಲ್ಲಿ ಸುಮಾರು 400 ಜನರು ಒಗ್ಗೂಡಿ ಜಾಗೃತಿ ಜಾಥಾ ನಡೆಸಿದ್ದಾರೆ. ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಸರ್ಕಾರಿ ಭೂಮಿಯ ಒತ್ತುವರಿ ವಿರುದ್ಧ ಜಾಥಾದಲ್ಲಿ ಅರಿವು ಮೂಡಿಸಿದ್ದಾರೆ.

“ಅಕ್ರಮಗಳ ವಿರುದ್ಧ ಹೋರಾಡಲು ಕಾರ್ಯಾಂಗ, ನ್ಯಾಯಾಂಗ ಹಾಗೂ ಶಾಸಕಾಂಗವನ್ನು ಬಳಸಿಕೊಂಡು ಸಮರ್ಥವಾಗಿ ಹೋರಾಡುತ್ತೇವೆ. ಯು.ಎಂ ಕಾವಲ್, ಹೆಮ್ಮಿಗೆಪುರ ಸೇರಿದಂತೆ ಬೆಂಗಳೂರಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ವಿರುದ್ಧ ಕಾನೂನಾತ್ಮಕವಾಗಿ ಹೋರಾಡುತ್ತೇವೆ. ನಮ್ಮ ಮುಂದಿನ ಪೀಳಿಗೆಗೆ ಪಾರ್ಕ್, ಪಾದಚಾರಿ ಮಾರ್ಗ, ಸುಸಜ್ಜಿತ ನಗರವನ್ನು ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ನಿವಾಸಿಗಳು ಸಂಕಲ್ಪ ಮಾಡಿದ್ದಾರೆ.

Advertisements

ಅಲ್ಲದೆ, ‘ಭೂಗಳ್ಳರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶವಿಲ್ಲ’ ಎಂಬ ಬೋರ್ಡ್‌ ಮತ್ತು’ಅಕ್ರಮ ಕಟ್ಟುವಿಕೆ ವಿರುದ್ಧ ಬೆಂಗಳೂರು’ ಎಂಬ ಸಂಘಟನೆಯ ಲೋಗೋವನ್ನೂ ಕೂಡ ಹಿರಿಯ ನಿವಾಸಿಗಳು ಅನಾವರಣ ಮಾಡಿದ್ದಾರೆ.

ಸಂಘಟನೆಯ ಉದ್ದೇಶಗಳು:
1. ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿದರೆ ಅದರ ಪರಿಣಾಮ ಏನಾಗುತ್ತದೆ ಎಂದು ಸ್ಥಳೀಯರಲ್ಲಿ ಜಾಗೃತಿ ಮೂಡಿಸುವುದು.
2. ಸಂಬಂಧಿಸಿದ ಸಂಸ್ಥೆಗಳಿಂದ ಮುಂದಿನ ಕ್ರಮ ಕೈಗೊಳ್ಳಲು ಸ್ಥಳೀಯರನ್ನು ತೊಡಗಿಸಿಕೊಳ್ಳುವುದು.
3. ರಾಜಕಾರಣಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ನಾವು ಸಾರ್ವಜನಿಕರು ಈ ರೀತಿ ಅಕ್ರಮದ ವಿರುದ್ಧ ಒಟ್ಟಾಗಿ ಹೋರಾಡುತ್ತೇವೆ ಎಂಬ ಸಂದೇಶ ಸಾರುವುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X