ಬೆಂಗಳೂರು | 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ‘ಆಯುಷ್ಮತಿ ಕ್ಲಿನಿಕ್’ಗೆ ಚಾಲನೆ

Date:

  • ಎಲ್ಲ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆ
  • ಮಹಿಳೆಯರಿಗಾಗಿ ರೂಪಗೊಂಡ ಕ್ಲಿನಿಕ್‌ನಲ್ಲಿ ಉಚಿತ ಆಪ್ತಸಮಾಲೋಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್‌’ಗಳನ್ನು ತೆರೆಯಲಾಗಿದೆ. ಈ ಬೆನ್ನಲ್ಲೇ, ಪಾಲಿಕೆಯ ಎಂಟು ವಲಯಗಳಲ್ಲಿ ಆಯ್ದ 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಸಣೆಗಾಗಿ ‘ಆಯುಷ್ಮತಿ ಕ್ಲಿನಿಕ್’ಗಳಿಗೆ ಸೋಮವಾರ ಬಿಬಿಎಂಪಿ ಚಾಲನೆ ನೀಡಿದೆ.

ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.

ಪ್ರತಿ ಸೋಮವಾರ – ಫಿಜಿಷಿಯನ್, ಮಂಗಳವಾರ – ಮೂಳೆ ಮತ್ತು ಕೀಲು ತಜ್ಞರು, ಬುಧವಾರ – ಶಸ್ತ್ರಚಿಕಿತ್ಸಾ ತಜ್ಞರು, ಗುರುವಾರ – ಮಕ್ಕಳ ತಜ್ಞರು, ಶುಕ್ರವಾರ – ಸ್ತ್ರೀರೋಗ ತಜ್ಞರು, ಶನಿವಾರ – ಇತರೆ(ಕಿವಿ, ಮೂಗು ಮತ್ತು ಗಂಟಲು, ನೇತ್ರ, ಚರ್ಮರೋಗ, ಮಾನಸಿಕ ರೋಗ ತಜ್ಞರಿಂದ ಮಹಿಳೆಯರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಿಳೆಯರಿಗೋಸ್ಕರ ರೂಪಗೊಂಡ ಈ ಕ್ಲಿನಿಕ್‌ನಲ್ಲಿ ಉಚಿತವಾಗಿ ಆಪ್ತಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔಷಧಿ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫರಲ್ ಸೇವೆಗಳು ಲಭ್ಯವಿರುತ್ತವೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...