ಬೆಂಗಳೂರು | ಮೇ 10ರಂದು ತಪ್ಪದೆ ಮತದಾನ ಮಾಡಲು ಐಟಿ-ಬಿಟಿ ಉದ್ಯೋಗಿಗಳಿಗೆ ಸಂಬಳ ಸಹಿತ ರಜೆ

Date:

Advertisements
  • ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡುವಂತೆ ಎಲ್ಲರಿಗೂ ತಿಳಿಸಿ
  • ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ

“ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ಎಲ್ಲರೂ ಮೇ 10ರಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಸಂಬಳ ಸಹಿತ ರಜೆ ನೀಡಲಾಗುವುದು” ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಭರವಸೆ ನೀಡಿದರು.

ಎಲೆಕ್ಟ್ರಾನಿಕ್ ಸಿಟಿಯ ಟೆಕ್ ಮಹೀಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವೇಳೆ ಮಾತನಾಡಿದ ಅವರು, “ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸ್ಥೆಗಳ ಸಿಇಒಗಳು ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಉದ್ಯೋಗಿಗಳಿಗೆ ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡಲು ತಿಳಿಸಿ” ಎಂದರು.

Advertisements

“ಬೆಂಗಳೂರು ವ್ಯಾಪ್ತಿಯಲ್ಲಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಮತದಾನ ಮಾಡುವ ಒಲವು ಹೆಚ್ಚಾಗಿ ಇರುವುದಿಲ್ಲ. ಈ ಸಂಬಂಧ ಅವರಲ್ಲಿರುವಂತಹ ತಪ್ಪು ಕಲ್ಪನೆ ಹಾಗೂ ಆಲೋಚನೆಗಳನ್ನು ಬದಲಿಸಿ ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ” ಎಂದು ಹೇಳಿದರು.

“ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಬಾರಿ ಹೆಚ್ಚು ಮತದಾನ ಮಾಡಿಸುವ ಉದ್ದೇಶವನ್ನಿಟ್ಟುಕೊಂಡು, ಎಲ್ಲ ಕಡೆ ಮತದಾನ ಜಾಗೃತಿ ಜಾಥ, ನಾಟಕ ಸೇರಿದಂತೆ ನಮ್ಮ ಬೆಂಗಳೂರು ಐಕಾನ್ಸ್‌ಗಳ ಮೂಲಕ ಮತದಾರರು ತಪ್ಪದೆ ಮತಚಲಾಯಿಸುವಂತೆ ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

ಈ ವೇಳೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಸಂಗಪ್ಪ, ಜಂಟಿ ಆಯುಕ್ತರಾದ ಕೃಷ್ಣಮೂರ್ತಿ, ನಾನಾ ಸಂಸ್ಥೆಗಳ ಸಿಇಒಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X