ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

Date:

Advertisements

ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿ ನಡೆಯುವ ಹಿನ್ನೆಲೆ, ಡಿ.14 ರಿಂದ ಡಿ.22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗುವಂತೆ, ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವಾರು ರೈಲುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಡಿಸೆಂಬರ್ 11 ರಂದು ಪ್ರಿನ್ಸಿಪಲ್ ಚೀಫ್ ಆಪರೇಷನ್ ಮ್ಯಾನೇಜರ್, ಎಸ್‌ಡಬ್ಲ್ಯೂಆರ್ ಅವರ ಅಧಿಸೂಚನೆಯ ಪ್ರಕಾರ, ರೈಲ್ವೆ ಸಚಿವಾಲಯವು ಡಿಸೆಂಬರ್ 14 ರಿಂದ ಡಿಸೆಂಬರ್ 18 ರವರೆಗೆ ಪೂರ್ವ-ಇಂಟರ್‌ಲಾಕಿಂಗ್ ಮತ್ತು ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಪುನನಿರ್ಮಾಣಕ್ಕಾಗಿ ಹಾಸನ ಯಾರ್ಡ್‌ನಲ್ಲಿ ನಾನ್-ಇಂಟರ್‌ಲಾಕಿಂಗ್‌ಗೆ ಅನುಮೋದನೆ ನೀಡಿದೆ.

ಡಿಸೆಂಬರ್ 14 ರಿಂದ 18ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Advertisements

ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಅನ್ನು ವಿಧಿಸಲಾಗುವುದು ಮತ್ತು ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ರದ್ದುಗೊಂಡ ರೈಲುಗಳ ವಿವರ
  • ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ಬೆಂಗಳೂರು-ಕಣ್ಣೂರು-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ಪ್ರತಿ ರಾತ್ರಿ ಸಂಚರಿಸುವ ರೈಲು) ರದ್ದು
  • ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ಪ್ರತಿ ರಾತ್ರಿ ಸಂಚರಿಸುವ ರೈಲು) ರದ್ದು
  •  ಡಿಸೆಂಬರ್ 14, 17, 19 ಮತ್ತು 21 ರಂದು ಯಶವಂತಪುರ-ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್ ರದ್ದು
  • ಡಿಸೆಂಬರ್ 13, 15, 18, 20 ಮತ್ತು 22 ರಂದು ಯಶವಂತಪುರ-ಕಾರವಾರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್ ರದ್ದು
  • ಡಿಸೆಂಬರ್ 16 ರಂದು ಯಶವಂತಪುರ-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದು
  •  ಡಿಸೆಂಬರ್ 17 ರಂದು ಮಂಗಳೂರು ಜಂಕ್ಷನ್-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ರದ್ದು

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಪತ್ನಿಗೆ ಒತ್ತಾಯಿಸಿದ ಪತಿ ವಿರುದ್ಧ ದೂರು ದಾಖಲು

ಪರ್ಯಾಯ ಸೇವೆ

ಈ ಅವಧಿಯಲ್ಲಿ ಬೆಂಗಳೂರನ್ನು ಕರಾವಳಿ ಕರ್ನಾಟಕಕ್ಕೆ ಸಂಪರ್ಕಿಸುವ ಏಕೈಕ ರೈಲು ಸೇವೆಯೆಂದರೆ (ರೈಲು ಸಂಖ್ಯೆ 16585/16586) ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಬೆಂಗಳೂರು-ಮುರ್ಡೇಶ್ವರ.

ಡಿಸೆಂಬರ್ 14 ರಿಂದ ಡಿಸೆಂಬರ್ 16 ರವರೆಗೆ, ರೈಲು ಯಶವಂತಪುರ ಬೈಪಾಸ್, ನೆಲಮಂಗಲ, ಶ್ರವಣಬೆಳಗೊಳ ಮತ್ತು ಹಾಸನ ಮೂಲಕ ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಮೂಲಕ ಚಲಿಸುತ್ತದೆ.

ಡಿಸೆಂಬರ್ 17 ರಿಂದ ಡಿಸೆಂಬರ್ 22 ರವರೆಗೆ ಮೈಸೂರು ಮಾರ್ಗವನ್ನು ಹೊರತುಪಡಿಸಿ, ಯಶವಂತಪುರ ಬೈಪಾಸ್, ತುಮಕೂರು, ಅರಸೀಕೆರೆ ಹಾಗೂ ಹಾಸನ ಮೂಲಕ ರೈಲು ಸಂಚಾರ ನಡೆಸಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X