ಬೆಂಗಳೂರು | ಜುಲೈ ವೇಳೆಗೆ ನಾಗಸಂದ್ರದಿಂದ ಮಾದಾವರದವರೆಗೆ ಮೆಟ್ರೋ ಸಂಚಾರ ಸಾಧ್ಯತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದೆ.

- Advertisement -

ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

₹298 ಕೋಟಿ ವೆಚ್ಚದ ಮೆಟ್ರೋ ಮಾರ್ಗವು ನಾಗಸಂದ್ರದ ಆಚೆಗೆ ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರ ನಿಲ್ದಾಣಗಳನ್ನು ಒಳಗೊಂಡಿದೆ.

ನಾಗಸಂದ್ರದಿಂದ ಮಾದಾವರವರೆಗಿನ (ಬಿಐಇಸಿ) ರೀಚ್–3 ಕಾಮಗಾರಿಗೆ 2017ರ ಮೇ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಭೂಸ್ವಾಧೀನ ಮತ್ತು ಕಾಮಗಾರಿಗೆ ₹964 ಕೋಟಿ ಮೀಸಲಿಡಲಾಗಿತ್ತು. ಭೂಸ್ವಾಧೀನ ಪ್ರಕ್ರಿಯೆ ಕಗ್ಗಂಟಾಗಿ ಪರಿಣಮಿಸಿತ್ತು. ಹೈಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥವಾಗಲು ಸುಮಾರು ನಾಲ್ಕು ವರ್ಷಗಳು ಬೇಕಾದವು. ಆನಂತರ ಕಾಮಗಾರಿ ಚುರುಕುಗೊಂಡಿತು. ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್) ಮೆಟ್ರೊ ನಿಲ್ದಾಣಗಳ ಕಾಮಗಾರಿ ಮುಕ್ತಾಯಗೊಂಡಿವೆ.

ತುಮಕೂರು ರಸ್ತೆಯಲ್ಲಿ ವಿಪರೀತ ವಾಹನ ದಟ್ಟಣೆ ಉಂಟಾಗಿದೆ. ನೆಲಮಂಗಲ ಕಡೆಯಿಂದ ಪೀಣ್ಯ ಕೈಗಾರಿಕಾ ವಲಯ ಸಹಿತ ಬೆಂಗಳೂರಿನ ನಾನಾ ಕಡೆಗೆ ಬರುವ ಕಾರ್ಮಿಕರು, ಉದ್ಯೋಗಿಗಳು ನಾಗಸಂದ್ರದವರೆಗೆ ಬಂದು ಮೆಟ್ರೊ ರೈಲು ಹತ್ತುತ್ತಿದ್ದಾರೆ. ಮಾದಾವರವರೆಗೆ ಮೆಟ್ರೊ ಪ್ರಾರಂಭವಾದರೆ, 3 ಕಿ.ಮೀ. ಮೊದಲೇ ಮೆಟ್ರೊ ಸೇವೆ ಅವರಿಗೆ ಲಭ್ಯವಾಗಲಿದೆ. ವಾಹನ ದಟ್ಟಣೆ ಕಡಿಮೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ.16ರಿಂದ 19ರ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್

“ಈಗಾಗಲೇ, ಮೆಟ್ರೋ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸದ್ಯಕ್ಕೀಗ ಪ್ರಕ್ರಿಯೆಯಲ್ಲಿ ಪೂರ್ಣಗೊಳಿಸುವ ಕೆಲಸ ಮಾತ್ರ ಬಾಕಿಯಿವೆ. ಇನ್ನು ಟ್ರ್ಯಾಕ್ ಹಾಕುವ ಕಾಮಗಾರಿ ಪೂರ್ಣಗೊಳ್ಳಲು 2.5 ತಿಂಗಳು ಬೇಕಾಗಲಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ ರೈಲುಗಳ ಪ್ರಾಯೋಗಿಕ ಓಡಾಟ ನಡೆಯಲಿದ್ದು, ಜುಲೈ ವೇಳೆಗೆ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ” ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...