ಬೆಂಗಳೂರು | ರಸ್ತೆಯಲ್ಲಿ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದ ಕಿಡಿಗೇಡಿಗಳು

Date:

  • ಆರೋಪಿಗಳ ವಿರುದ್ಧ ವರ್ತೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು
  • ಕಾರ್‌ ಮುಂದೆ ಬೈಕ್‌ ಅಡ್ಡಗಟ್ಟಿ ಕಾರಿನ ಕಿಟಿಕಿ ಒಡೆದು ಹಾಕಿದ ಕಿಡಿಗೇಡಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊಲೆ, ಹಲ್ಲೆ ಸೇರಿದಂತೆ ಇನ್ನಿತರ ಘಟನೆಗಳು ವರದಿಯಾಗುತ್ತಿವೆ. ರಸ್ತೆಗಳಲ್ಲಿ ವ್ಹೀಲಿಂಗ್‌ ಹುಚ್ಚಾಟದಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿ ಮಾಡುತ್ತಿದ್ದವರ ಜತೆಗೆ ಇದೀಗ ರಸ್ತೆಯಲ್ಲಿ ಕಾರು ಚಾಲಕ ಹಾರ್ನ್‌ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದು ಹಾಕಿರುವ ಘಟನೆ ನಡೆದಿದೆ.

- Advertisement -

ಜುಲೈ 14ರಂದು ವರ್ತೂರು ಬಳಿ ಈ ಘಟನೆ ನಡೆದಿದೆ. ಮೂರರಿಂದ ನಾಲ್ಕು ಜನ ಬೈಕ್ ಸವಾರರು ಕಾರಿನ ಮುಂದೆ ಸಂಚಾರ ಮಾಡುವಾಗ ಕಾರು ಚಾಲಕ ದಾರಿ ಕೇಳಿದ್ದಾನೆ. ಇದಕ್ಕೆ ಕೋಪಗೊಂಡ ನಾಲ್ವರು ಬೈಕ್ ಸವಾರರು ಕಾರು ಚಲಿಸುವ ವೇಳೆ ಅಡ್ಡಾದಿಡ್ಡಿ ಬೈಕ್ ಚಲಾವಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದೇ ಸಮಯದಲ್ಲಿ ಕಾರಿನ ಗಾಜು ಒಡೆದು ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಕಾರಿಗೆ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾರೆ. ಮುಂದುವರೆದು ಕಾರ್‌ ಫಾಲೋ ಮಾಡಿಕೊಂಡು ಹೋದ ಬೈಕ್‌ ಸವಾರರು ಗುಂಜೂರು ಗೇಟ್‌ನ ಅಪಾರ್ಟ್‌ಮೆಂಟ್‌ ಬಳಿ ಕಾರು ಚಾಲಕನೊಂದಿಗೆ ಗಲಾಟೆ ಮಾಡಿದ್ದಾರೆ. ಕಾರ್‌ ಮುಂದೆ ಬೈಕ್‌ ಅಡ್ಡಗಟ್ಟಿ ಕಾರಿನ ಕಿಟಿಕಿ ಒಡೆದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾ ಕದ್ದ ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್

ಈ ಸಂಪೂರ್ಣ ಘಟನೆ ಕಾರಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂತ್ರಸ್ತರು ಈ ಬಗ್ಗೆ ಟ್ವೀಟ್‌ ಮೂಲಕ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ ಡಿಸಿಪಿ ಎಸ್‌ ಗಿರೀಶ್ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ದೂರುದಾರರನ್ನು ಸಂಪರ್ಕಿಸಿದ್ದೇವೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಶೀಘ್ರ ಬಂಧಿಸಲಾಗುವುದು” ಎಂದು ಭರವಸೆ ನೀಡಿದ್ದರು.

“ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ವರ್ತೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ನಮ್ಮ ಕಣ್ಗಾವಲಿನಲ್ಲಿ ಇಂತಹ ಅಶಿಸ್ತಿನ ನಡವಳಿಕೆ ಅಥವಾ ಗೂಂಡಾಗಿರಿಗೆ ಅವಕಾಶವಿರುವುದಿಲ್ಲ ಮತ್ತು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗುರುವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ. ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ” ಎಂದು ಬೆಂಗಳೂರು ನಗರ ಪೊಲೀಸ್‌ ಟ್ವೀಟ್‌ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...