ಜೂನ್‌ನಲ್ಲಿ ಮಳೆ ಕೊರತೆಯಾಗಿದ್ದು, ಜುಲೈನಲ್ಲಿ ಬೆಂಗಳೂರಿನಲ್ಲಿ ಮುಂಗಾರು ಚುರುಕುಗೊಂಡಿದೆ. ಸೋಮವಾರ ನಗರದ ಕೆಲವೆಡೆ ತುಂತುರು ಮಳೆ ಸುರಿದರೆ, ಇನ್ನು ಕೆಲವೆಡೆ ಸಾಧಾರಣ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ವರದಿಯಂತೆ, ಸೋಮವಾರ ಸಂಜೆ 7 ಗಂಟೆಗೆ ದಾಸರಹಳ್ಳಿಯ ಬಾಗಲಕುಂಟೆ ಮತ್ತು ಶೆಟ್ಟಿಹಳ್ಳಿಯಲ್ಲಿ 20 ಮಿಮೀ ಮಳೆ ದಾಖಲಾಗಿದೆ. ನಂತರ ವಿದ್ಯಾರಣ್ಯಪುರದಲ್ಲಿ 17.5 ಮಿಮೀ ಮಳೆಯಾಗಿದೆ.
ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಬೆಂಗಳೂರು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.