ಬೆಂಗಳೂರು | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಕೊಲೆ ಪ್ರಕರಣ; ಓರ್ವ ಪೊಲೀಸ್ ವಶಕ್ಕೆ

Date:

ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆಕೆಯ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಕಾರು ಚಾಲಕ ಕಿರಣ್ ಎಂದು ಗುರುತಿಸಲಾಗಿದೆ. ಈತನು ಗುತ್ತಿಗೆಯ ಆಧಾರದ ಮೇಲೆ ಕಳೆದ ಐದು ವರ್ಷಗಳಿಂದ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು. ಈತನ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಿರಣ್ ಎಂಬ ವ್ಯಕ್ತಿ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದನು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯವಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಈತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದಕ್ಕೆ ಕೋಪಗೊಂಡು ಆತ ಪ್ರತಿಮಾ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರತಿಮಾ ಅವರ ಕೊಲೆಯಾದ ಬಳಿಕ ಕಿರಣ್ ಚಾಮರಾಜನಗರದ ಕಡೆಗೆ ಪರಾರಿಯಾಗುವ ವೇಳೆ, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿ ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು, “ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಲವು ಜನರನ್ನು ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಆರೋಪಿಯ ಬಂಧನವಾಗಿಲ್ಲ. ತನಿಖೆ ಮುಂದುವರೆದಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ನುಗ್ಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ

ಏನಿದು ಪ್ರಕರಣ?

ಈ ಘಟನೆ ರಾಜ್ಯ ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್‌ಮೆಂಟ್‌ನಲ್ಲಿ ಶನಿವಾರ ರಾತ್ರಿ 7:30 ರ ಸುಮಾರಿಗೆ ಗಣಿ ಭೂವಿಜ್ಙಾನ ಇಲಾಖೆ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಅವರನ್ನು ಕೊಲೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...