ಬೆಂಗಳೂರು | ಜೈಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ನ ಕೊಲೆ

Date:

Advertisements
  • ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ನಗರದ ಹೊಸ ರೋಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹದಿಂದ ಬಿಡುಗಡೆಯಾಗಿ ಹೊರ ಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ನೊಬ್ಬನನ್ನು ವಿರೋಧಿ ಗ್ಯಾಂಗ್ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ.

ಸಿದ್ದಾಪುರ ಮಹೇಶ್ ಹತ್ಯೆಯಾದ ರೌಡಿಶೀಟರ್. ಈತ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. 2020ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್​ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದನು. ಶುಕ್ರವಾರ ಈತನಿಗೆ ಜೈಲಿನಿಂದ ಬಿಡುಗಡೆಯಾಗಿತ್ತು.

ನಗರದ ಹೊಸ ರೋಡ್ ಜಂಕ್ಷನ್ ಬಳಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕಾರಿನಲ್ಲಿ ತೆರಳುತ್ತಿದ್ದನು. ಈ ವೇಳೆ, ದಾಳಿ ನಡೆಸಿದ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿದರು. ಬಳಿಕ, ಮಾರಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

Advertisements

ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ರಾನ್ಸ್‌ಫಾರ್ಮರ್ ಸ್ಪೋಟ; ಸುಟ್ಟು ಕರಕಲಾದ ಎರಡು ಕಾರು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿದ್ದಾಪುರ ಮಹೇಶ್‌ನ ವಿರೋಧಿ ಗ್ಯಾಂಗ್​ ಎಂದು ಗುರುತಿಸಿಕೊಂಡಿದ್ದ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್‌ನಲ್ಲಿ ಮಹೇಶ್ ಲೀಡರ್ ಆಗಿದ್ದನು ಎಂದು ತಿಳಿದು ಬಂದಿದೆ. ಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ‌ಗೆ ಇಳಿದಿರುವುದಾಗಿ ನಗರ ಆಗ್ನೇಯ ವಿಭಾಗದ‌ ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X