ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ

Date:

  • ತಪ್ಪೆಸಗಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರ ಒತ್ತಾಯ
  • ಬಸ್ ಚಾಲಕನ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ವೇಳೆ ಬಿಡದಿಯ ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್ ಅತಿವೇಗ ಮತ್ತು ಅಜಾಗರೂಕತೆಯಿಂದ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಇತರ ಚಾಲಕರಲ್ಲಿ ಭಯ ಹುಟ್ಟಿಸಿದ ಘಟನೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿಡದಿ ಹೋಬಳಿ ಹನುಮಂತನಗರದ ಕೋತಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ10 ಎಫ್ 0492ರ ಚಾಲಕ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಚಲಿಸುತ್ತಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಅಭಿಷೇಕ್ ಎಂಬುವವರು ಅಪ್‌ಲೋಡ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ. ತಪ್ಪೆಸಗಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ. ಈ ಪೋಸ್ಟ್ ಆಧರಿಸಿ ಬಸ್ ಚಾಲಕನ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 14 ರಂದು ಬೆಳಗ್ಗೆ 10.41 ಗಂಟೆಗೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಹನುಮಂತನಗರ ರಸ್ತೆಯ ಬಿಡದಿ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಿಂದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಮೈಸೂರು ಕಡೆಗೆ ಬಸ್ ಅನ್ನು ಎದುರು ದಿಕ್ಕಿನಿಂದ ಚಲಾಯಿಸುತ್ತಿದ್ದರು. ಈ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ವಾಹನಗಳ ಮುಂದೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ವಿಡಿಯೊದಿಂದ ದೃಢಪಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವಿಡಿಯೋವನ್ನು ಟ್ವಿಟರ್‍‌ನಲ್ಲಿ ಹಾಕಿರುವ ಅಭಿಷೇಕ್ ಭಾರದ್ವಾಜ್ ಎಂಬವರು, ರಸ್ತೆಯ ನಿಯಮಗಳನ್ನು ಮುರಿಯಲು ಸರ್ಕಾರಿ ವಾಹನಗಳಿಗೆ ಅನುಮತಿಸಲಾಗಿದೆಯೇ? ಅಪಘಾತಗಳಿಗೆ ಎಕ್ಸ್‌ಪ್ರೆಸ್‌ ವೇಯನ್ನು ದೂರಬಹುದೇ? ಎಂದು ಪ್ರಶ್ನಿಸಿ, ಎಡಿಜಿಪಿ ಅಲೋಕ್ ಕುಮಾರ್‍‌ ಅವರಿಗೆ ವಿಡಿಯೋ ಟ್ಯಾಗ್ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳು; ಶೌಚಾಲಯದಲ್ಲಿ ಅವಿತು ಕುಳಿತ ವೈದ್ಯ

ಎಕ್ಸ್‌ಪ್ರೆಸ್ ವೇಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಕಾನೂನು ಬಾಹಿರವಾಗಿದ್ದು, ಇತರೆ ವಾಹನಗಳ ಚಾಲಕರಿಗೆ ಭಯ ಹುಟ್ಟಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಚಾಮರಾಜನಗರ ಡಿಪೋಗೆ ಸೇರಿದ ಬಸ್ ಬೆಂಗಳೂರಿನಿಂದ ಮಾದೇಶ್ವರ ಬೆಟ್ಟಕ್ಕೆ ಹೊರಟಿರುವುದು ತಿಳಿದುಬಂದಿದೆ.

ಡಿಪೋ ಮ್ಯಾನೇಜರ್‌ಗೆ ವಿಷಯ ತಿಳಿಸಿದ್ದು, ಚಾಲಕನ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ. ಸದ್ಯದಲ್ಲೇ ಬಸ್ ವಶಕ್ಕೆ ಪಡೆಯಲಾಗುವುದು ಎಂದು ಬಿಡದಿ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ...

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ...

ದರ್ಶನ್ ಪ್ರಕರಣ | ಮೊಬೈಲ್‌ಗಾಗಿ ಪೌರಕಾರ್ಮಿಕರನ್ನು ರಾಜಕಾಲುವೆಗೆ ಇಳಿಸಿದ ಪೊಲೀಸರು; ದಸಂಸ ಖಂಡನೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷನಾಶದ ಸಲುವಾಗಿ ಮೃತ ವ್ಯಕ್ತಿ...

ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದೆ: ಸಚಿವ ಎಂ ಬಿ ಪಾಟೀಲ್‌

ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ...