5 ತಿಂಗಳಿನಲ್ಲಿ 55 ಬಲಿ ಪಡೆದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ

Date:

  • ₹8,480 ಕೋಟಿ ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣ
  • ಮೂಳೆ ಮುರಿತದಂತಹ ಸಮಸ್ಯೆಗಳಿಗೆ ಒಳಗಾದ 184 ಮಂದಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಕಳೆದ ಐದು ತಿಂಗಳಿನಲ್ಲಿ 570 ಅಪಘಾತಗಳು ಸಂಭವಿಸಿವೆ. ಈ ಪೈಕಿ 55 ಮಂದಿ ಸಾವನ್ನಪ್ಪಿದ್ದಾರೆ.

ಎಕ್ಸ್‌ಪ್ರೆಸ್‌ ವೇ ನಲ್ಲಿ ಅತಿ ವೇಗದ ಚಾಲನೆ, ಚಾಲಕರ ನಿರ್ಲಕ್ಷ್ಯ, ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಅಪಘಾತಗಳಿಗೆ ಪ್ರಮುಖ ಕಾರಣಗಳು ಎಂದು ವರದಿಗಳು ಹೇಳುತ್ತಿವೆ. ಇದು ಹಲವರ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.

ಜನವರಿಯಿಂದ ಮೇ ವರೆಗೂ ಎಕ್ಸ್‌ಪ್ರೆಸ್‌ ವೇ ನಲ್ಲಿ ಒಟ್ಟು 570 ಅಪಘಾತಗಳು ವರದಿಯಾಗಿವೆ. ಈ ಪೈಕಿ, 279 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 184 ಮಂದಿಗೆ ಮೂಳೆ ಮುರಿತದಂತಹ ಸಮಸ್ಯೆಗಳಿಗೆ ಒಳಗಾಗಿದ್ದಾರೆ. 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ 55 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಎಕ್ಸ್‌ಪ್ರೆಸ್‌ ವೇನಲ್ಲಿ ಬಹುತೇಕ ವಾಹನಗಳು 160 ಕಿ.ಮೀ ವೇಗದಲ್ಲಿ ಸಂಚರಿಸುತ್ತವೆ. ಈ ವೇಗ ಹೆದ್ದಾರಿಯಲ್ಲಿ ನಿರ್ಗಮನ ಮತ್ತು ಪ್ರವೇಶ ಪ್ರದೇಶಗಳಿರುವುದರಿಂದ ಇದು ಅಪಾಯಕಾರಿ. ವಾಹನಗಳ ವೇಗಕ್ಕೆ ತಡೆಯೊಡ್ಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಹೆದ್ದಾರಿಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಬೇಕು ಎಂದು ತಜ್ಷರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬರಲಿರುವ ಮಾನ್ಸೂನ್‌ ಮಳೆಗೆ ಬೇಕಾದ ಸಿದ್ಧತೆಯನ್ನು ಬಿಬಿಎಂಪಿ ಮಾಡಿಕೊಂಡಿದೆಯೇ?

ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಬೆಂಗಳೂರು ಮತ್ತು ಮೈಸೂರು ಒಂದಾಗಿವೆ. ಈ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 119 ಕಿ.ಮೀ ಉದ್ದ ಎಕ್ಸ್‌ಪ್ರೆಸ್‌ ವೇ ಅನ್ನು ₹8,480 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಎಕ್ಸೆಪ್ರೆಸ್‌ ವೇ ಅನ್ನು ಮಂಡ್ಯದಲ್ಲಿ ಲೋಕಾರ್ಪಣೆ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ದಸರಾ ಉತ್ಸವ ಆಚರಣೆ; ಅನುದಾನ ಬಿಡುಗಡೆಗೆ ನಿಯೋಗ

ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ...

ವಂಚನೆ ಪ್ರಕರಣ | ಚೈತ್ರಾ ಹೆಸರಿನೊಂದಿಗೆ ‘ಕುಂದಾಪುರ’ ಬಳಕೆಗೆ ಆಕ್ಷೇಪ; ಕೋರ್ಟ್‌ನಲ್ಲಿ ದಾವೆ

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದಾರೆ. ಅವರ ಬಗ್ಗೆ...

ಬೆಂಗಳೂರು | ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್, ಕರೆಂಟ್...

ಬೆಂಗಳೂರು | 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ...