₹10 ಸಾವಿರ ಕೋಟಿ ಖರ್ಚು ಮಾಡಿ ಬೆಂಗಳೂರು-ಮೈಸೂರಿಗೆ ಅವೈಜ್ಞಾನಿಕ ಎಕ್ಸ್‌ಪ್ರೆಸ್‌ ವೇ ನಿರ್ಮಾಣ: ಮೋಹನ್ ದಾಸರಿ

Date:

  • ಅಮಾಯಕರ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ
  • ವಾಹನ ಚಾಲಕರಿಗೆ ಆಪ್‌ನಿಂದ ಜಾಗರೂಕತೆಯಿಂದ ಚಲಿಸಿ ಎಂಬ ಸಂದೇಶ

“ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ 9 ತಿಂಗಳಿನಲ್ಲಿ 165ಕ್ಕೂ ಹೆಚ್ಚು ಅಮಾಯಕ ಚಾಲಕರು ಮತ್ತು ಪ್ರಯಾಣಿಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ₹10 ಸಾವಿರ ಕೋಟಿ ಖರ್ಚು ಮಾಡಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿದ್ದಾರೆ” ಎಂದು ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

- Advertisement -

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಣಮಣಿಕೆ ಟೋಲ್ ಪ್ಲಾಜಾ ಬಳಿ ಆಮ್‌ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಬೆಳಗ್ಗೆ ‘ಸಾವಿನ ರಹದಾರಿ’ ಅಭಿಯಾನ ನಡೆಸಿದರು. ಜತೆಗೆ ವಾಹನ ಚಲಾಯಿಸುವವರಿಗೆ ಕರಪತ್ರ ನೀಡುವ ಮೂಲಕ ಜಾಗರೂಕತೆಯಿಂದ ಚಲಿಸಿ, ಪ್ರಾಣವನ್ನು ಉಳಿಸಿಕೊಳ್ಳಿ ಎಂಬ ಸಂದೇಶವನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ವೇಳೆ ಮಾತನಾಡಿದ ಅವರು, “ಭ್ರಷ್ಟಾಚಾರದಿಂದ ಕೂಡಿರುವ ಇಂತಹ ಹೆದ್ದಾರಿಗಳು ದೇಶಕ್ಕೆ ಅಪಮಾನಕಾರಿ ಸಂಗತಿ. ಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಭ್ರಷ್ಟಾಚಾರವಾಗಿದ್ದು, ಈ ಹಿಂದಿನ ಬಿಜೆಪಿ ಸರ್ಕಾರವು ಸಂಪೂರ್ಣ ಹೊಣೆಗಾರಿಕೆಯನ್ನು ಹೊರಬೇಕಾಗುತ್ತದೆ. ಈಗಿನ ಕಾಂಗ್ರೆಸ್ ಸರ್ಕಾರವು ಸೂಕ್ತ ತನಿಖೆ ನಡೆಸಿ ಹೆದ್ದಾರಿ ಸರಿಪಡಿಸಬೇಕು” ಎಂದು ತಿಳಿಸಿದರು.  

“ಸರ್ಕಾರವೇ ಈ ಹೆದ್ದಾರಿಯ ಟೋಲ್ ಸಂಗ್ರಹ ಮಾಡಬಾರದೆಂದು ತಿಳಿಸಿದ್ದರೂ, ಸಹ ಜುಲೈ ಒಂದರಿಂದ ಶ್ರೀರಂಗಪಟ್ಟಣದಲ್ಲಿ ಟೋಲ್ ಸಂಗ್ರಹಣೆ ಮಾಡುತ್ತಿರುವುದು ಭಾರತೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ದುರ್ನಡತೆಗೆ ಸಾಕ್ಷಿ. ರಾಜ್ಯ ಕಾಂಗ್ರೆಸ್ ಸರ್ಕಾರವು ಸೂಕ್ತ ಆದೇಶವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಜು.2ರಂದು ಎರಡು ಗಂಟೆ ಅವಧಿಗೆ ವಾಣಿಜ್ಯ ಸೇವೆ ತಾತ್ಕಾಲಿಕ ಸ್ಥಗಿತ

ಅಭಿಯಾನದಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ರಾಜ್ಯ ಉಪಾಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು, ಉಪಾಧ್ಯಕ್ಷ ಸುರೇಶ್ ರಾಥೋಡ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...