ಬೆಂಗಳೂರು | ಮಗುವಿಗೆ ಹೃದಯಾಘಾತವಾಗಿದೆ ಎಂದ ನಿಮ್ಹಾನ್ಸ್

Date:

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಒಂದು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮಗುವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಬೆಡ್‌ ಇಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದರು. ಅಲ್ಲದೇ, ಮಗುವಿಗೆ ಹೃದಯಾಘಾತವಾಗಿದೆ. ಮಗುವನ್ನು ಬದುಕಿಸಲು ವೈದ್ಯರು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ” ಎಂದು ನಿಮ್ಹಾನ್ಸ್ ಹೇಳಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಮ್ಹಾನ್ಸ್, “ಹಾಸನ ಸರ್ಕಾರಿ ಆಸ್ಪತ್ರೆಯಿಂದ ಮಗುವನ್ನು ನವೆಂಬರ್ 30ರ ಮಧ್ಯಾಹ್ನ 12.45ಕ್ಕೆ ಡಿಸ್ಚಾರ್ಜ್‌ ಮಾಡಿದ್ದಾರೆ. ಮಧ್ಯಾಹ್ನ 2:30ಕ್ಕೆ ನಿಮ್ಹಾನ್ಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬಂದಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿಮ್ಹಾನ್ಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಸಿಟಿ ಸ್ಕ್ಯಾನ್ ಮಾಡುವ ವೇಳೆ ಹಲವು ದೋಷಗಳು ಕಂಡು ಬಂದಿದ್ದವು. ಮಧ್ಯಾಹ್ನ 3 ಗಂಟೆಗೆ ಮಗುವಿಗೆ ಹೃದಯಾಘಾತವಾಗಿದೆ” ಎಂದು ತಿಳಿಸಿದೆ.

ಜಸ್ಟಿಸ್‌ ಫಾರ್‌ ಅಜಯ್‌

ಮಗುವಿನ ಸಾವಿಗೆ ನಿಮ್ಹಾನ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿ ಕುಟುಂಬಸ್ಥರು ‘ಜಸ್ಟಿಸ್ ಫಾರ್ ಅಜಯ್’ ಎಂಬ ಟ್ಯಾಗ್ ಲೈನ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಬ್ಯುಲೆನ್ಸ್ ಚಾಲಕರು ಸಹ ಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ.

ನಿಮ್ಹಾನ್ಸ್ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಏನಿದು ಘಟನೆ?

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಒಂದು ವರ್ಷದ ಪುಟ್ಟ ಕಂದಮ್ಮ ಹಾಸನದ ಮನೆಯೊಂದರಲ್ಲಿ ತಾಯಿ ಕೈಯಿಂದ ಜಾರಿ ಸುಮಾರು 10 ಅಡಿ ಮೇಲಿನಿಂದ ಕೆಳಗೆ ಬಿದ್ದಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿತ್ತು. ತೀವ್ರವಾಗಿ ಗಾಯಗೊಂಡ ಮಗು ಅಸ್ವಸ್ಥಗೊಂಡಿತ್ತು. ಕೂಡಲೇ ಪೋಷಕರು ಮಗುವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಹಾಸನದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ತೆರಳುವಂತೆ ಪೋಷಕರಿಗೆ ತಿಳಿಸಿದ್ದರು. ನಿಮ್ಹಾನ್ಸ್‌ ಆಡಳಿತ ಮಂಡಳಿಗೆ ಕರೆ ಮಾಡಿ ಮಗುವಿಗೆ ಬೆಡ್ ಕಾಯ್ದಿರಿಸುವಂತೆ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಬಳಿಕ, ಅವರೇ ಆಂಬುಲೆನ್ಸ್‌ನಲ್ಲಿ ಝೀರೋ ಟ್ರಾಫಿಕ್ ಮೂಲಕ ಮಗುವನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದರು.

ಕೇವಲ 1:40 ನಿಮಿಷದಲ್ಲಿ ಹಾಸನದಿಂದ ಬೆಂಗಳೂರಿಗೆ ಮಗುವನ್ನು ಕರೆದುಕೊಂಡು ಬರಲಾಗಿತ್ತು. ಬಳಿಕ, ನಿಮ್ಹಾನ್ಸ್‌ ಆಸ್ಪತ್ರೆಯ ಸಿಬ್ಬಂದಿ ಬೆಡ್‌ ಇಲ್ಲವೆಂದು ಮಗುವಿಗೆ ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ನೀಡದೆ ಹಾಗೆಯೇ, ಆಂಬುಲೆನ್ಸ್‌ನಲ್ಲಿ ಬಿಟ್ಟಿದ್ದಾರೆ. ಸಾವು ಬದುಕಿನೊಡನೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡದೆ, ನಿಮ್ಹಾನ್ಸ್‌ ಆಸ್ಪತ್ರೆಯ ವೈದ್ಯರು ದುರ್ವರ್ತನೆ ತೋರಿದ್ದರು.

ಈ ಸುದ್ದಿ ಓದಿದ್ದೀರಾ? ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಮಗು ನೋವಿನಿಂದ ಬಳಲುತ್ತಿದ್ದರು ಆಸ್ಪತ್ರೆಯ ವೈದ್ಯರು ಕನಿಷ್ಠ ಪ್ರಾಥಮಿಕ ತನಿಖೆಯನ್ನು ಸಹ ನಡೆಸಿಲ್ಲ. ಮಗುವಿಗೆ ಬೆಡ್ ನೀಡಿಲ್ಲ. ಆಂಬುಲೆನ್ಸ್‌ನಲ್ಲಿಯೇ ಅರ್ಧ ಗಂಟೆಗೂ ಹೆಚ್ಚು ಸಮಯ ಹಾಗೇ ಬಿಟ್ಟಿದ್ದಾರೆ. ಝೀರೋ ಟ್ರಾಫಿಕ್​​ನಲ್ಲಿ ಬಂದ ಮಗುವಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಲಭಿಸದ ಕಾರಣ ಮಗು ಸಾವನ್ನಪ್ಪಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...