ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

Date:

Advertisements

ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಪುಟ್ಟ ಕಂದಮ್ಮನಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಚಿಕಿತ್ಸೆ ನೀಡದೆ ನಿಮ್ಹಾನ್ಸ್‌ ಆಸ್ಪತ್ರೆಯ ಸಿಬ್ಬಂದಿ ದುರ್ವರ್ತನೆ ತೋರಿದ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಒಂದು ವರ್ಷದ ಪುಟ್ಟ ಕಂದಮ್ಮ ಹಾಸನದ ಮನೆಯೊಂದರಲ್ಲಿ ತಾಯಿ ಕೈಯಿಂದ ಸುಮಾರು 10 ಅಡಿ ಮೇಲಿನಿಂದ ಜಾರಿ ಕೆಳಗೆ ಬಿದ್ದಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿತ್ತು. ತೀವ್ರವಾಗಿ ಗಾಯಗೊಂಡ ಮಗು ಅಸ್ವಸ್ಥಗೊಂಡಿತ್ತು. ಕೂಡಲೇ ಪೋಷಕರು ಮಗುವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಹಾಸನದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ತೆರಳುವಂತೆ ಪೋಷಕರಿಗೆ ತಿಳಿಸಿದ್ದರು. ನಿಮ್ಹಾನ್ಸ್‌ ಆಡಳಿತ ಮಂಡಳಿಗೆ ಕರೆ ಮಾಡಿ ಮಗುವಿಗೆ ಬೆಡ್ ಕಾಯ್ದಿರಿಸುವಂತೆ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಬಳಿಕ, ಅವರೇ ಆಂಬುಲೆನ್ಸ್‌ನಲ್ಲಿ ಝೀರೋ ಟ್ರಾಫಿಕ್ ಮೂಲಕ ಮಗುವನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದರು.

Advertisements

ಕೇವಲ 1:40 ನಿಮಿಷದಲ್ಲಿ ಹಾಸನದಿಂದ ಬೆಂಗಳೂರಿಗೆ ಮಗುವನ್ನು ಕರೆದುಕೊಂಡು ಬರಲಾಗಿತ್ತು. ಬಳಿಕ, ನಿಮ್ಹಾನ್ಸ್‌ ಆಸ್ಪತ್ರೆಯ ಸಿಬ್ಬಂದಿ ಬೆಡ್‌ ಇಲ್ಲವೆಂದು ಮಗುವಿಗೆ ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ನೀಡದೆ ಹಾಗೆಯೇ, ಆಂಬುಲೆನ್ಸ್‌ನಲ್ಲಿ ಬಿಟ್ಟಿದ್ದಾರೆ. ಸಾವು ಬದುಕಿನೊಡನೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡದೆ, ನಿಮ್ಹಾನ್ಸ್‌ ಆಸ್ಪತ್ರೆಯ ವೈದ್ಯರು ದುರ್ವರ್ತನೆ ತೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯಕರನ ಮೊಬೈಲ್‌ನಲ್ಲಿತ್ತು 13 ಸಾವಿರ ನಗ್ನ ಫೋಟೋ: ದೂರು ದಾಖಲಿಸಿದ ಪ್ರಿಯತಮೆ

ಮಗು ನೋವಿನಿಂದ ಬಳಲುತ್ತಿದ್ದರು ಆಸ್ಪತ್ರೆಯ ವೈದ್ಯರು ಕನಿಷ್ಠ ಪ್ರಾಥಮಿಕ ತನಿಖೆಯನ್ನು ಸಹ ನಡೆಸಿಲ್ಲ. ಮಗುವಿಗೆ ಬೆಡ್ ನೀಡಿಲ್ಲ. ಆಂಬುಲೆನ್ಸ್‌ನಲ್ಲಿಯೇ ಅರ್ಧ ಗಂಟೆಗೂ ಹೆಚ್ಚು ಸಮಯ ಹಾಗೇ ಬಿಟ್ಟಿದ್ದಾರೆ. ಝೀರೋ ಟ್ರಾಫಿಕ್​​ನಲ್ಲಿ ಬಂದ ಮಗುವಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಲಭಿಸದ ಕಾರಣ ಮಗು ಸಾವನ್ನಪ್ಪಿದೆ.

ನಿಮ್ಹಾನ್ಸ್‌ ಆಡಳಿತ ಮಂಡಳಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ನಿಮ್ಹಾನ್ಸ್ ಆಸ್ಪತ್ರೆ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಮಗು ಸಾವಿಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ಇಂದು ಕೂಡ ನಿಮ್ಹಾನ್ಸ್‌ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಲು ಪೋಷಕರು ಮತ್ತು ಆಂಬುಲೆನ್ಸ್‌ ಚಾಲಕರು ಮುಂದಾಗಿದ್ದಾರೆ.

“ಮಗುವನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು. ತಲೆಬುರುಡೆ ಹಲವು ಕಡೆ ಮುರಿದಿತ್ತು. ಹೀಗಾಗಿ, ಆತನ ಸ್ಥಿತಿ ಗಂಭೀರವಾಗಿತ್ತು. ಸಿಟಿ ಸ್ಕ್ಯಾನ್ ಮಾಡಿ ಬಾಲಕನನ್ನು ಉಳಿಸಲು ಪ್ರಯತ್ನಿಸಿದರೂ, ಗಾಯಗೊಂಡ 2 ಗಂಟೆಗಳ ನಂತರ ಮಗು ಸಾವನ್ನಪ್ಪಿದೆ” ಎಂದು ನಿಮ್ಹಾನ್ಸ್‌ ವೈದ್ಯಾಧಿಕಾರಿ ಡಾ.ಎಚ್.ಎಸ್.ಶಶಿಧರ್ ಹೇಳಿದ್ದಾರೆ.

ಮಗು ಸಾವನ್ನಪ್ಪಿರುವುದು ದುರದೃಷ್ಟಕರ. ನಿಮ್ಹಾನ್ಸ್ ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿ ಹಾಸಿಗೆಗಳು ಯಾವಾಗಲೂ ತುಂಬಿರುತ್ತವೆ. ಮಗುವಿನ ದಾಖಲಾತಿಯಲ್ಲಿ ಏನಾದರೂ ವಿಳಂಬವಾಗಿದ್ದರೆ, ನಾನು ನಿಮ್ಹಾನ್ಸ್ ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X