ಬೆಂಗಳೂರು | ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಮಲ್ಲೇಶ್ವರಂ ವಿಭಾಗದ 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, 10ನೇ ಅಡ್ಡರಸ್ತೆ ಮಾರುಕಟ್ಟೆ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆ ನಡೆಸಿದೆ.

“ಮಲ್ಲೇಶ್ವರಂನ ಮಲ್ಲೇಶ್ವರಂ ನಿವಾಸಿ ಕಲ್ಯಾಣ ಸಂಘ ಹಾಗೂ ವರ್ತಕರ ಸಂಘಗಳ ಮನವಿ ಜತೆಗೆ ಉಚ್ಚ ನ್ಯಾಯಾಲಯ ಹೊರಡಿಸಿರುವ ಆದೇಶದನುಸಾರ ನ.3 ರಂದು ಬೆಳಗ್ಗೆ 11.30 ಘಂಟೆಯಿಂದ ಸಂಪಿಗೆ ರಸ್ತೆ, 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, 10ನೇ ಅಡ್ಡರಸ್ತೆ, ಮಾರುಕಟ್ಟೆ ರಸ್ತೆಗಳ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು” ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

“4 ಟ್ರ್ಯಾಕ್ಟರ್ ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಿಕೊಂಡು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿದ್ದ ಅನಧಿಕೃತ ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವು ಮಾಡಲಾಯಿತು” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾರ್ಯಾಚರಣೆ ನಡೆಯುವ ಮುನ್ನ ವ್ಯಾಪಾರಿಗಳ ಗಮನಕ್ಕೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ಹೇಳಲಾಗಿದೆ. ಆದರೂ, ಸುಮಾರು 1.50 ಕೀ.ಮೀ ರಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ಮುಂದುವರೆಸಿದ್ದರು. ಅಂತಹವರ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರಿಗೆ ದಂಡ ವಿಧಿಸುವ ಜತೆಗೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಆ್ಯಪ್‌ ಮೂಲಕ ಸಾಲ, ಅಶ್ಲೀಲ ಫೋಟೋ ಬೆದರಿಕೆ, 45 ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡನ ಪುತ್ರ

ಈ ವೇಳೆ ಕಾರ್ಯಪಾಲಕ ಅಭಿಯಂತರ ಜಯಶಂಕರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಹರ್ಷ ನಾಯ್ಕ್, ಆರೋಗ್ಯಾಧಿಕಾರಿಗಳು, ಪೋಲಿಸ್ ಅಧಿಕಾರಿಗಳು/ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಮಾರ್ಷಲ್‌, ಪೌರಕಾರ್ಮಿಕರು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ ನಿಧನ: ಆತ್ಮಹತ್ಯೆ ಶಂಕೆ?

ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ರಣಜಿ ಆಟಗಾರ ಡೇವಿಡ್ ಜಾನ್ಸನ್​(52)...

ಕೊಡಗು | ಗೋಣಿಕೊಪ್ಪಲಿನಲ್ಲಿ ದಿಢೀರ್ ಕುಸಿತಗೊಂಡ ಹೋಟೆಲ್ ಕಟ್ಟಡ; ಹಲವರಿಗೆ ಗಾಯ

ಕೊಡಗು ಜಿಲ್ಲೆಯ ಗೋಣಿಕೊಪ್ಪಲ್‌ನಲ್ಲಿ ಹೋಟೆಲ್‌ ಇದ್ದ ಕಟ್ಟಡವೊಂದು ದಿಢೀರನೆ ಕುಸಿತಗೊಂಡ ಘಟನೆ...

ಕನ್ನಡದ ವಿಚಾರದಲ್ಲಿ ರಾಜಿಯಾಗದೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ...

ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಭೂಮಿ ಪೂಜೆ

ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ...