ಬೆಂಗಳೂರು | ಮಂಗಳೂರಿನಲ್ಲಿ ನ್ಯಾಯಾಧೀಶರ ನೇಮಕಾತಿ ಪರೀಕ್ಷೆ ಬರೆಯಲು ಅವಕಾಶ; ಮಾನವೀಯತೆ ಮೆರೆದ ಹೈಕೋರ್ಟ್

Date:

ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆ ಬರೆಯಲು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಅವರು ವಾಸ ಇರುವ ಊರಿನಲ್ಲೇ ಅವಕಾಶ ಕಲ್ಪಿಸುವ ಮೂಲಕ ಹೈಕೋರ್ಟ್‌ ಮಾನವೀಯತೆ ಮೆರೆದಿದೆ. ಹೈಕೋರ್ಟ್‌ ಇದೇ ಮೊದಲ ಬಾರಿಗೆ ಇಂತಹದೊಂದು ವಿಶೇಷ ಅವಕಾಶವನ್ನು ಕಲ್ಪಿಸಿದೆ.

- Advertisement -

ತಾವು ನೆಲೆಸಿರುವ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅವಕಾಶ ಕೋರಿ ಅಭ್ಯರ್ಥಿ ಸಲ್ಲಿಸಿದ್ದ ಮನವಿಯನ್ನು ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿ ಸಮಿತಿಯ ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್‌ ಕುಮಾರ್, ಕೆ ಸೋಮಶೇಖರ್‌, ಎಸ್‌ ಸುನಿಲ್ ದತ್‌ ಯಾದವ್‌, ಅಶೋಕ್‌ ಎಸ್‌ ಕಿಣಗಿ ಮತ್ತು ಎಂ ನಾಗಪ್ರಸನ್ನ ಅವರು ಮಾನ್ಯ ಮಾಡಿದ್ದಾರೆ. ಈ ನಿರ್ಧಾರಕ್ಕೆ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಸಮ್ಮತಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಿವಿಲ್‌ ನ್ಯಾಯಾಧೀಶರ 57 ಹುದ್ದೆಗಳ ಭರ್ತಿಗೆ ಹೈಕೋರ್ಟ್‌ನಿಂದ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಜುಲೈ 23ರಂದು ಪೂರ್ವಭಾವಿ ಪರೀಕ್ಷೆ ನಡೆದಿತ್ತು. 6000 ಅಭ್ಯರ್ಥಿಗಳ ಪೈಕಿ 1,022 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾಗಿದ್ದರು. ಇವರಲ್ಲಿ ನೇತ್ರಾವತಿ ಕೂಡ ಒಬ್ಬರು. ಒಂದು ಪರೀಕ್ಷೆಯನ್ನು ನೇತ್ರಾವತಿ ಅವರು ಬರೆದಿದ್ದಾರೆ. ಇಂದು ಮತ್ತೊಂದು ಪರೀಕ್ಷೆ ಬರೆಯಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕುಮಾರಸ್ವಾಮಿಯವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ: ಸಚಿವ ಎಚ್‌ ಸಿ ಮಹದೇವಪ್ಪ

“ಲಿಖಿತ ಮುಖ್ಯ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರವೇ ನಡೆಯಲಿದೆ. ಬೇರೆಲ್ಲೂ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಮಂಗಳೂರಿನ ವಕೀಲೆ ನೇತ್ರಾವತಿ ಅವರು ಈ ಪರೀಕ್ಷೆಗೆ ಹಾಜರಾಗಬೇಕಿದ್ದು, ಅವರೀಗ ತುಂಬು ಗರ್ಭಿಣಿಯಾಗಿರುವ ಕಾರಣ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲೇ ಪರೀಕ್ಷೆ ಬರೆಯಲು ಅವರಿಗೆ ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯುವ ಸ್ಥಳದಲ್ಲಿ ಅಭ್ಯರ್ಥಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಕ್ಕೆ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ” ಎಂದು ರಿಜಿಸ್ಟ್ರಾರ್‌ ಜನರಲ್‌ ಕೆ ಎಸ್ ಭರತ್‌ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...