ಬೆಂಗಳೂರು | ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ ತೆರವು ಮಾಡುವಂತೆ ಆದೇಶ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

- Advertisement -

“ಬಿಬಿಎಂಪಿ ಅಧಿಕಾರಿಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿ ನೀಡಿ ಈ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸಿ ಮೂರು ವಾರಗಳ ಕಾಲಾವಕಾಶ ನೀಡಿದೆ. ನಗರದಲ್ಲಿ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡುಬಂದರೆ ಪಾಲಿಕೆ ಹಾಗೂ ರಾಜ್ಯ ಸರ್ಕಾರ ತಲಾ ₹50,000 ದಂಡ ಕಟ್ಟಬೇಕೆಂದು ನಿರ್ದೇಶನ ನೀಡಿದೆ. ಹಾಗಾಗಿ, ನ್ಯಾಯಾಲಯದ ನಿರ್ದೇಶನದಂತೆ ಕೂಡಲೇ ತುರ್ತು ಕ್ರಮ ಕೈಗೊಂಡು ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್/ಎಲ್.ಇ.ಡಿ. ಇನ್ನಿತರೇ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ವಹಿಸಬೇಕು. ತೆರವು ಕೈಗೊಂಡ ಕ್ರಮದ ಬಗ್ಗೆ ಅಂಕಿ ಅಂಶಗಳು, ದಾಖಲೆಗಳ ಸಮೇತ ಅನುಪಾಲನಾ ವರದಿಯನ್ನು ಆ.16ರೊಳಗೆ ಕಡ್ಡಾಯವಾಗಿ ಸಲ್ಲಿಸಬೇಕು” ಎಂದು ಆದೇಶದ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಸೂಚನೆಗೆ ತಪ್ಪಿದರೆ ನ್ಯಾಯಾಲಯದ ಆದೇಶ ಉಲ್ಲಂಘನೆ, ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪದಿಂದ ಮುಂದೆ ಎದುರಾಗುವ ಪರಿಣಾಮಗಳಿಗೆ ಸಂಬಂಧಪಟ್ಟ ಅಪರ ಹಾಗೂ ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರು ವೈಯಕ್ತಿಕ ಜವಾಬ್ದಾರಿಯಾಗುತ್ತಾರೆ” ಎಂದು ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಆ. 15ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌: ಬಿಎಂಆರ್‌ಸಿಎಲ್‌

“ಸಂಬಂಧಪಟ್ಟ ವಲಯ ಆಯುಕ್ತರ ಉಸ್ತುವಾರಿಯಲ್ಲಿ ಕಟ್ಟುನಿಟ್ಟಾಗಿ ಎಲ್ಲ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಸೇರಿದಂತೆ ಇನ್ನಿತರ ಜಾಹೀರಾತು ಫಲಕ ತೆರವುಗೊಳಿಬೇಕು. ಸಂಬಂಧಪಟ್ಟ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರು ಈ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಹೋರ್ಡಿಂಗ್ಸ್ , ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ತೆರವುಗೊಳಿಸಲು ವಿಫಲರಾದಲ್ಲಿ ಸಂಬಂಧಪಟ್ಟ ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ತಲಾ ₹50,000 ಠೇವಣಿಯನ್ನು ಅವರಿಂದ ವಸೂಲಿ ಮಾಡಿ ನ್ಯಾಯಾಲಯದಲ್ಲಿ ಇಡಲಾಗುವುದು” ಎಂದು ತಿಳಿಸಿದೆ.

“ಈ ಕುರಿತು ಪಾಲಿಕೆಯ ಎಲ್ಲ ವಲಯ ಆಯುಕ್ತರರು ತಮ್ಮ ವಲಯ ವ್ಯಾಪ್ತಿಯಲ್ಲಿನ ಜಾಹೀರಾತುಗಳ ತೆರವಿಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...