ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಒರ್ವ ವ್ಯಕ್ತಿ ಬಲಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ ಸಂಭವಿಸಿದೆ. ತಡರಾತ್ರಿ ಲಾರಿಯೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಒರಿಸ್ಸಾ ಮೂಲದ ನಿರಂಜನ್ ಹಿಟ್ ಆ್ಯಂಡ್ ರನ್‌ಗೆ ಬಲಿಯಾದ ದುರ್ದೈವಿ.
ಮೃತ ನಿರಂಜನ್ ಕುಟುಂಬ ಕೆಲಸದ ನಿಮಿತ್ತ ಬೆಂಗಳೂರಿನ ಚಂದಾಪುರದಲ್ಲಿ ನೆಲೆಸಿದೆ. ಕೆಲಸ ಮುಗಿಸಿ ನ.9 ರಂದು ತಡರಾತ್ರಿ ನಿರಂಜನ್ ಮನೆಗೆ ತೆರಳುವ ವೇಳೆ ವೇಗವಾಗಿ ಬಂದ ಲಾರಿ ನಿರಂಜನ್‌ಗೆ ಢಿಕ್ಕಿ ಹೊಡೆದಿದೆ.
ಪಾದಚಾರಿಗೆ ಢಿಕ್ಕಿ ಹೊಡೆದ ಬಳಿಕ ಲಾರಿಯನ್ನು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಲಾರಿ ಢಿಕ್ಕಿ ಹೊಡೆದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ ನಿರಂಜನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುದನಾಳದಲ್ಲಿಟ್ಟು ₹3 ಕೋಟಿ ಮೌಲ್ಯದ 5 ಕೆ.ಜಿ ಚಿನ್ನ ಸಾಗಣೆಗೆ ಯತ್ನ; ಜಪ್ತಿ
ಘಟನಾ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.