ಬೆಂಗಳೂರು | ಸಂಚಾರ ನಿಯಮ ಉಲ್ಲಂಘಿಸಿದರೆ ಐಟಿಎಂಎಸ್ ಮೂಲಕ ದಂಡ

Date:

  • ಐಟಿಎಂಎಸ್ ಮೂಲಕ 18 ಲಕ್ಷ ಪ್ರಕರಣ ಆನ್‌ಲೈನ್‌ನಲ್ಲಿ ದಾಖಲು
  • ವಾಹನಗಳ ಮಾಲೀಕರಿಗೆ ನೋಟಿಸ್ ಕಳುಹಿಸಿದ ಸಂಚಾರ ಪೊಲೀಸರು

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳಿಗೆ ಐಟಿಎಂಎಸ್ (ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ) ಮೂಲಕ ನಗರ ಸಂಚಾರ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಈ ಹಿಂದೆ ನಗರದಲ್ಲಿ ಸಂಚಾರ ಪೊಲೀಸರು ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರನ್ನು ಹಿಡಿದು ದಂಡ ಕಟ್ಟಿಸಿಕೊಳ್ಳುತ್ತಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಐಟಿಎಂಎಸ್ ಕ್ಯಾಮರಾ ವ್ಯವಸ್ಥೆಯನ್ನು ಸಂಚಾರ ಪೊಲೀಸರು ಪ್ರಾರಂಭಿಸಿದ್ದರು.

ಅದರಂತೆ, ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಚಾಲನೆ, ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಸೇರಿದಂತೆ ಕಳೆದ ಮೂರೂವರೆ ತಿಂಗಳಿನಲ್ಲಿ ಬರೋಬ್ಬರಿ 19,04,227 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಐಟಿಎಂಎಸ್ ಮೂಲಕ 18 ಲಕ್ಷ ಪ್ರಕರಣಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವರ್ಷದ ಆರಂಭದಿಂದ ವಾಹನಗಳನ್ನು ತಡೆದು ದಂಡ ವಿಧಿಸುವುದನ್ನು ಸಂಚಾರ ಪೊಲೀಸರು ಕಡಿಮೆ ಮಾಡಿದ್ದಾರೆ.

ಹೆಚ್ಚು ಪ್ರಕರಣಗಳು ದಾಖಲಾಗಿರುವ ವಾಹನಗಳ ಮಾಲೀಕರಿಗೆ ಸಂಚಾರ ಪೊಲೀಸರು ನೋಟಿಸ್ ಕಳುಹಿಸಿದ್ದು, ಚುನಾವಣೆ ಮುಗಿದ ನಂತರ ನಿಯಮ ಉಲ್ಲಂಘಿಸಿದವರ ಮನೆಗೆ ತೆರಳಿ ದಂಡ ವಸೂಲಿ ಮಾಡಲು ಪೊಲೀಸರು ಸಜ್ಜಾಗುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆಗಾಲಕ್ಕೂ ಮುನ್ನ ಕೆರೆಗಳ ಪುನಶ್ಚೇತನ ಕಾಮಗಾರಿ ಮಾಡಿ ; ಆಕ್ಷನ್ ಏಡ್ ಸಂಸ್ಥೆ

“ಐಟಿಎಂಎಸ್ ತಂತ್ರಜ್ಞಾನದ ಬಳಕೆಯಿಂದ ಸಂಚಾರ ಪೊಲೀಸರು ನಗರದಲ್ಲಿನ ವಾಹನಗಳ ನಿಯಂತ್ರಣ, ಸಂಚಾರ ದಟ್ಟಣೆಯನ್ನು ತಡೆಗಟ್ಟುವ ಕಡೆ ಗಮನಹರಿಸಲು ಅನುಕೂಲವಾಗುತ್ತಿದೆ” ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ ಎ ಸಲೀಂ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...