ಅತ್ತಿಗುಪ್ಪೆ ಮೆಟ್ರೋ ಘಟನೆ | ವಿಡಿಯೋ ಪ್ರಸಾರಗೈದ ಮಾಧ್ಯಮಗಳ ವಿರುದ್ದ ಕಮಿಷನರ್ ಆಕ್ರೋಶ

Date:

ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋವನ್ನು ಪ್ರಸಾರಗೈದ ಮಾಧ್ಯಮಗಳ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಮಾಧ್ಯಮ ನೀತಿ ಸಂಹಿತೆಯ ವಿರುದ್ಧವಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸುತ್ತೋಲೆ ಟ್ವೀಟ್ ಮಾಡಿರುವ ಬೆಂಗಳೂರು ಪೊಲೀಸ್ ಆಯುಕ್ತರು, “ಇತ್ತೀಚಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಘಟನೆಯ ವಿಡಿಯೋ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದು ಯುವಕನ ವೈಯಕ್ತಿಕ ದುರಂತ, ಪೋಷಕರು ದುಃಖದಲ್ಲಿದ್ದಾರೆ. ಈ ವಿಡಿಯೋದಿಂದಾಗಿ ಅವರಿಗೆ ಹೆಚ್ಚಿನ ನೋವಾಗದಿರಲಿ. ಈ ವಿಷಯವನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮಕ್ಕೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

“ಮಾಧ್ಯಮಗಳು ಆತ್ಮಹತ್ಯೆ, ಅಪರಾಧ, ಮಹಿಳೆ, ಮಕ್ಕಳು ವೃದ್ಧರ ವಿರುದ್ಧದ ಶೋಷಣೆ, ಸಾವು, ಅಪಘಾತ ಮೊದಲಾದವುಗಳ ದೃಶ್ಯವನ್ನು ಪ್ರಸಾರ ಮಾಡುತ್ತಿದ್ದು, ಇದು ಜನರಿಗೆ ನೋಡಲು ಸಾಧ್ಯವಾಗದ್ದು. ಮಾಧ್ಯಮಗಳು ಇಂತಹ ವಿಡಿಯೋ, ಸುದ್ದಿ ಪ್ರಸಾರ ಮಾಡುವಾಗ ಜವಾಬ್ದಾರಿಯುತವಾಗಿರಬೇಕು ಮತ್ತು ಶಿಸ್ತು ಇರಬೇಕು” ಎಂದು ಉಲ್ಲೇಖಿಸಲಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸುತ್ತೋಲೆಯನ್ನು ಪೊಲೀಸ್ ಆಯುಕ್ತರು ಎಕ್ಸ್ (ಟ್ವೀಟ್) ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅತ್ತಿಗುಪ್ಪೆ ಮೆಟ್ರೋ ಹಳಿಗೆ ಹಾರಿ ಯುವಕ ಧ್ರುವ್ ಠಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಡಿಯೋವನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಯುವಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ವರದಿಯಾಗಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಮೊದಲ ವರ್ಷದ ಬಿಎ ಎಲ್ಎಲ್‌ಬಿ ವಿದ್ಯಾರ್ಥಿ ಮಾನಸಿಕ ಖಿನ್ನತೆಗೆ ಔಷಧಿ ಪಡೆಯುತ್ತಿದ್ದು ಅದು ಆತನ ಕುಟುಂಬಸ್ಥರಿಗೂ ತಿಳಿದಿತ್ತು ಎಂದು ವರದಿ ಉಲ್ಲೇಖಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...