- ಚುನಾವಣಾ ಸಮಯದಲ್ಲಿ ಯಾವುದೇ ಪಕ್ಷದ ಪರ ಗಲಾಟೆ, ರೌಡಿಸಂ ಮಾಡದಂತೆ ಎಚ್ಚರಿಕೆ
- ರೌಡಿಶೀಟರ್ಗಳ ಮನೆ ಮೇಲೆ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ದಾಳಿ
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ಸೂಚನೆ ಮೇರೆಗೆ ಎಲ್ಲ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ವೇಳೆ, ವಾರಂಟ್ ಪೆಂಡಿಂಗ್ ಇದ್ದ ಕೆಲವು ರೌಡಿಗಳ ಮನೆಯಲ್ಲಿ ಮಚ್ಚು, ಲಾಂಗು ಪತ್ತೆಯಾಗಿವೆ.
ಕೇಂದ್ರ ವಿಭಾಗ, ದಕ್ಷಿಣ ವಿಭಾಗ, ಪಶ್ಚಿಮ ವಿಭಾಗ ಹಾಗೂ ಉತ್ತರ ವಿಭಾಗದಲ್ಲಿ ಸುಮಾರು 500ಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ಮಚ್ಚು, ಲಾಂಗು ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದ ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನುಳಿದ ರೌಡಿಗಳಿಗೆ ಚುನಾವಣಾ ಸಮಯದಲ್ಲಿ ಯಾವುದೇ ಪಕ್ಷದ ಪರವಾಗಿ ತೆರಳಿ ಗಲಾಟೆ, ರೌಡಿಸಂ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.