ಬೆಂಗಳೂರು | ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

Date:

ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಗೈದಿದ್ದ ಆರೋಪಿಗಳನ್ನು ಹಿಂದುತ್ವ ಸಂಘಟನೆಗಳು ಸನ್ಮಾನಿಸಿರುವುದನ್ನು ಖಂಡಿಸಿ, ಪ್ರಕರಣದ ತ್ವರಿತ ವಿಚಾರಣೆಗೆ ಆಗ್ರಹಿಸಿ ‘ಗೌರಿ ಬಳಗ’ವು ಪ್ರತಿಭಟನೆ ನಡೆಸಿದೆ.

- Advertisement -

ಆರೋಪಿಗಳಿಗೆ ಸನ್ಮಾನ ಮಾಡುವುದು ಹತ್ಯೆಯನ್ನು ಪ್ರಚೋದಿಸುತ್ತದೆ. ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಗೌರಿ ಹತ್ಯೆ ಆರೋಪಿಗಳಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಗೌರಿ ಬಳಗದ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, “ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ಜಾಮೀನು ಪಡೆದು ಹೊರಬಂದಿದ್ದರು. ಅವರಿಗೆ ವಿಜಯಪುರದಲ್ಲಿ ಸನ್ಮಾನ ಮಾಡಲಾಗಿದೆ. ಮತ್ತೋರ್ವ ಆರೋಪಿ ಶ್ರೀಕಾಂತ್ ಪಾಂಗಾರ್ಕರ್‌ ಎಂಬಾತನನ್ನು ಮಹಾರಾಷ್ಟ್ರದಲ್ಲಿ ಶಿವಸೇನೆ (ಶಿಂಧೆ ಬಣ) ಪಕ್ಷಕ್ಕೆ ಸೇರಿಸಿಕೊಂಡಿದೆ. ಇದು, ಕೊಲೆಯನ್ನು ಪ್ರಚೋದಿಸುತ್ತದೆ. ಮತ್ತಷ್ಟು ಹತ್ಯೆಗಳಿಗೆ ಕುಮ್ಮಕ್ಕು ನೀಡುತ್ತದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಗೌರಿ ಸ್ಮಾರಕ ಟ್ರಸ್ಟ್‌ ಅಧ್ಯಕ್ಷ ವಿ.ಎಸ್‌ ಶ್ರೀಧರ್, “ಗೌರಿ ಹತ್ಯೆ ಆರೋಪಿಗಳಿಗೆ ಜಾಮೀನು ದೊರೆತಿದೆಯಷ್ಟೆ, ಅವರು ಆರೋಪ ಮುಕ್ತರಾಗಿಲ್ಲ. ಜಾಮೀನು ಸಿಕ್ಕಾಗಲೇ ಅವರಿಗೆ ಸನ್ಮಾನ ಮಾಡಿರುವುದು ಆತಂಕದ ವಿಚಾರ. ಆರೋಪಿಗಳಿಗೆ ಸನ್ಮಾನ ಮಾಡುವ ಮೂಲಕ ಗೌರಿ ಹತ್ಯೆಯ ಹಿಂದೆ ಇರುವುದು ನಾವೇ ಎಂದು ಸಂಘ ಪರಿವಾರ ಒಪ್ಪಿಕೊಳ್ಳುತ್ತಿದೆ” ಎಂದರು.

ಈದಿನ.ಕಾಮ್‌ನ ಬಿ.ಸಿ ಬಸವರಾಜ್ ಮಾತನಾಡಿ, “ಹತ್ಯೆ, ಅತ್ಯಾಚಾರ ಆರೋಪಿಗಳಿಗೆ ಸನ್ಮಾನ ಮಾಡುವ ಪ್ರಕರಣಗಳು ಉತ್ತರ ಭಾರತದಲ್ಲಿ ವರದಿಯಾಗುತ್ತಿತ್ತು. ಕರ್ನಾಟಕದಲ್ಲಿ ಆದ ಉದಾಹರಣೆಗಳಿಲ್ಲ. ಇಲ್ಲಿ ಮೊದಲ ಬಾರಿಗೆ ಈ ರೀತಿ ಆಗಿದೆ. ಕುವೆಂಪು, ಬವಸಣ್ಣನ ನಾಡಿನಲ್ಲಿ ಈ ರೀತಿಯ ಘಟನೆ ನಡೆದಿರುವುದು ವಿಷಾದನೀಯ” ಎಂದು ಹೇಳಿದರು.

ಸಾಮಾಜಿಕ ಚಿಂತಕ ಶಿವಸುಂದರ್ ಮಾತನಾಡಿ, “ಆರೋಪಿಗಳಿಗೆ ಸನ್ಮಾನ ಮಾಡುವ ಮೂಲಕ ಗೌರಿ ಹತ್ಯೆ ಹಿಂದೆ ನಾವೇ ಇರುವುದು ಎಂದು ಸಂಘಪರಿವಾರ ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದೆ. ಗೌರಿ ಹತ್ಯೆ ಪ್ರಕರಣದ ವಿಚಾರಣೆಯಲ್ಲೂ ವಿಳಂಬವಾಗುತ್ತಿದೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದರೂ ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ವಿಳಂಬವಾಗಿದೆ. ಹಾಗಾಗಿ, ಈ ಪ್ರಕರಣದಲ್ಲಿ ತ್ವರಿತ ವಿಚಾರಣೆ ನಡೆಯಬೇಕಿದೆ” ಎಂದು ಆಗ್ರಹಿಸಿದರು.

“ಗೌರಿ ಹತ್ಯೆ ಪ್ರಕರಣದಲ್ಲಿ 2019ರ ವೇಳಗೆ 19 ಆರೋಪಿಗಳನ್ನು ಬಂಧಿಸಲಾಗಿತ್ತು. ಅದೇ ವರ್ಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ಅನ್ನೂ ಸಲ್ಲಿಸಲಾಗಿತ್ತು. 2022ರಿಂದ ಪ್ರಕರಣದ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿವೆ. ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅದರೆ, ವಿಶೇಷ ನ್ಯಾಯಾಲಯ ಸ್ಥಾಪಿಸಲು ಸಾಧ್ಯವಿಲ್ಲವೆಂದು ಹೈಕೋರ್ಟ್‌ ಪ್ರತಿಕ್ರಿಯಿಸಿದೆ. ಇದು ಗಂಭೀರ ಪ್ರಕರಣವಾಗಿದ್ದು, ಸರ್ಕಾರವು ನ್ಯಾಯಾಲಯಕ್ಕೆ ಇದರನ್ನು ಅರ್ಥ ಮಾಡಿಸಬೇಕು. ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನಾ ಸಭೆಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿಯ ಚೆನ್ನಮ್ಮ, ವಕೀಲರಾದ ವಿನಯ್ ಶ್ರೀನಿವಾಸ್, ಪೂರ್ಣ, ಶ್ರೀಪಾದ್ ಭಟ್, ಹನುಮೇಗೌಡ, ಐಶ್ವರ್ಯ, ಕಾರ್ಮಿಕ ನಾಯಕಿ ಎಸ್‌ ವರಲಕ್ಷ್ಮೀ ಸೇರಿದಂತೆ ಗೌರಿ ಲಂಕೇಶ್ ಸಂಗಾತಿಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...