ಬೆಂಗಳೂರು | ಸೆಕ್ಯೂರಿಟಿ ಗಾರ್ಡ್‌ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಪರಾರಿಯಾದ ಪುಡಿ ರೌಡಿ

Date:

  • ಸೆಕ್ಯೂರಿಟಿ ಗಾರ್ಡ್‌ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
  • ಬೆಂಗಳೂರಿನ ಆರ್‌ ಟಿ ನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲು

ಉತ್ತರ ಬೆಂಗಳೂರಿನ ಆರ್‌ಟಿ ನಗರದ ಎಂಎಲ್‌ಎ ಲೇಔಟ್‌ನಲ್ಲಿ ಸೋಮವಾರ ಮಧ್ಯರಾತ್ರಿ 2.30ರ ಸುಮಾರಿಗೆ ಪುಡಿ ರೌಡಿಯೊಬ್ಬ 54 ವರ್ಷದ ಸೆಕ್ಯೂರಿಟಿ ಗಾರ್ಡ್‌ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ನಡೆದಿದೆ.

- Advertisement -

ಸೆಕ್ಯೂರಿಟಿ ಗಾರ್ಡ್‌ ಆಲ್ಬರ್ಟ್ ಹಲ್ಲೆಗೊಳಗಾದ ವ್ಯಕ್ತಿ. ಇವರು ಎಂಎಲ್‌ಎ ಲೇಔಟ್‌ 1ನೇ ಮುಖ್ಯರಸ್ತೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದಾರೆ. ನಿತ್ಯದಂತೆ ಸೋಮವಾರ ಮಧ್ಯರಾತ್ರಿ ಕರ್ತವ್ಯದಲ್ಲಿದ್ದಾಗ 2:30ರ ಸುಮಾರಿಗೆ ಸುಮಾರು 25 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಅಲ್ಬರ್ಟ್‌ ಅವರು ಕುಳಿತಿದ್ದ ಕುರ್ಚಿ ಸುತ್ತಮುತ್ತ ಓಡಾಡಲು ಪ್ರಾರಂಭಿಸಿದ್ದಾನೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ವೇಳೆ ಅಲ್ಬರ್ಟ್ ‘ಯಾರಪ್ಪ ನೀನು, ಈ ಸಮಯದಲ್ಲಿ ಇಲ್ಲೆಲ್ಲ ಓಡಾಡಬಾರದು ಕ್ಯಾಮರಾಗಳಿವೆ’ ಎಂದು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಆ ಯುವಕ ಅಲ್ಬರ್ಟ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ತನ್ನ ಬಳಿ ಇದ್ದ ಚಾಕುವಿನಿಂದ ಆಲ್ಬರ್ಟ್ ಕೆನ್ನೆ ಕೊಯ್ದು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ತನ್ನ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ ಬಿಬಿಎಂಪಿ

ಆಲ್ಬರ್ಟ್ ಅವರ ಕೆನ್ನೆಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಈ ವೇಳೆ ಸ್ಥಳೀಯರೊಬ್ಬರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಆರ್‌ಟಿ ನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆಕ್ಯೂರಿಟಿ ಗಾರ್ಡ್‌ ಮೇಲೆ ಆರೋಪಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...