ಬೆಂಗಳೂರು | ಜುಲೈ 30ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ

Date:

  • ಯಲಹಂಕ ವ್ಯಾಪ್ತಿಯಲ್ಲಿ ಅಧಿಕ 17 ಮಿಲಿ ಮೀಟರ್ ಮಳೆ ದಾಖಲು
  • ಬೆಂಗಳೂರಿನಲ್ಲಿ ಜು. 30ರವರೆಗೆ ಗರಿಷ್ಠ ತಾಪಮಾನ 27ರಿಂದ 29 ಡಿ.ಸೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬಹುತೇಕ ಕಡೆ ಜೋರು ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬೆಳಗ್ಗೆ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ರಾತ್ರಿ ವೇಳೆಗೆ ಜೋರು ಮಳೆಯಾಗುತ್ತಿದೆ. ಈ ಮಳೆ ಜುಲೈ 30ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಬಿಸಿಲು ಮರೆಯಾಗಿದೆ. ಚಳಿ ವಾತಾವರಣ ಹೆಚ್ಚಾಗಿದೆ. ಹೀಗಾಗಿ, ಜನರು ಸ್ವೇಟರ್, ಟೋಪಿ, ಬಿಸಿ ಪಾನೀಯಗಳಿಗೆ ಮೊರೆ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಯಲಹಂಕ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆವರೆಗೆ ಅತ್ಯಧಿಕ ಮಳೆ ದಾಖಲಾಗಿದೆ. ಬುಧವಾರ ನಗರದ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ತಡರಾತ್ರಿಯವರೆಗೂ ಮಳೆ ಸುರಿದಿದೆ. ಯಲಹಂಕ ವ್ಯಾಪ್ತಿಯಲ್ಲಿ ಅಧಿಕ 17 ಮಿಲಿ ಮೀಟರ್ ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಜುಲೈ 30ರವರೆಗೆ ಗರಿಷ್ಠ ತಾಪಮಾನ 27ರಿಂದ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ಭಾರೀ ಮಳೆಗೆ ರಸ್ತೆಗಳು ಜಲಾವೃತ

ಬುಧವಾರ ಬೆಳಗ್ಗೆ ಜಿಟಿಜಿಟಿಯಿಂದ ಶುರುವಾದ ಮಳೆ ಸಾಯಂಕಾಲದ ವೇಳೆಗೆ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯಿಂದ ಹೊರ ವರ್ತುಲ ರಸ್ತೆಯ ಇಕೋಸ್ಪೇಸ್, ಇಬ್ಲೂರ್‌ ಹಾಗೂ ಬೆಳ್ಳಂದೂರು ಡೌನ್ ರಾಂಪ್ ಬಳಿಯ ರಸ್ತೆಗಳು ಜಲಾವೃತಗೊಂಡಿದ್ದವು. ಇದರಿಂದ ಸಂಜೆಯ ಪೀಕ್-ಅವರ್ ಟ್ರಾಫಿಕ್ ಮೇಲೆ ಪರಿಣಾಮ ಬೀರಿತು. ಇಬ್ಲೂರು ಕಡೆಗೆ ಹೋಗುವ ವಾಹನಗಳು ಸಂಚಾರ ದಟ್ಟಣೆಯಲ್ಲಿ ಸಿಕ್ಕಿಹಾಕಿಕೊಂಡಿದ್ದವು. ಪ್ರಯಾಣಿಕರು ನೀರಿನಲ್ಲಿ ವಾಹನಗಳನ್ನು ಸಂಚರಿಸಲು ಹರಸಾಹಸ ಪಡಬೇಕಾಯಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

ಸಂಚಾರ ದಟ್ಟಣೆಯನ್ನು ತಪ್ಪಿಸಲು ವಾಹನ ಬಳಕೆದಾರರು ಸಾಧ್ಯವಾದರೆ ಪರ್ಯಾಯ ರಸ್ತೆಗಳನ್ನು ಬಳಸಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ವಿನಂತಿಸಿದರು.

“ಮಳೆ ಇರುವ ಕಾರಣ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ ಮತ್ತು ಪರ್ಯಾಯ ರಸ್ತೆಗಳನ್ನು ಬಳಸಿ” ಎಂದು ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಟ್ವೀಟ್ ಮಾಡಿದ್ದಾರೆ.

ಕುಂದಲಹಳ್ಳಿ, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ ಮತ್ತು ವೈಟ್‌ಫೀಲ್ಡ್ ಸಂಚಾರ ಪೊಲೀಸ್ ವ್ಯಾಪ್ತಿಯ ಪ್ರದೇಶಗಳಲ್ಲಿ ಇದೇ ರೀತಿಯ ನಿಧಾನಗತಿಯ ಸಂಚಾರದ ಪ್ರಕರಣಗಳು ವರದಿಯಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...