ಬೆಂಗಳೂರು | ₹5,000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಟರ್ಮಿನಲ್-2ನಲ್ಲಿ ಮಳೆ ನೀರು ಸೋರಿಕೆ

Date:

  • ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಟರ್ಮಿನಲ್‌ 2 ಉದ್ಘಾಟಣೆಯಾಗಿತ್ತು
  • ಕೇವಲ 30 ನಿಮಿಷ ಸುರಿದ ಮಳೆಗೆ ಟರ್ಮಿನಲ್‌ನಲ್ಲಿ ನೀರು ತುಂಬಿಕೊಂಡಿದೆ ಎಂದು ನೆಟ್ಟಿಗರ ಆಕ್ರೋಶ

ರಾಜ್ಯ ರಾಜಧಾನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹5000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಟರ್ಮಿನಲ್‌-2ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಇದನ್ನು ಕಂಡ ನೆಟ್ಟಿಗರು ಅಪಹಾಸ್ಯ ಮಾಡುತ್ತಿದ್ದು, ಆಕ್ರೋಶವೂ ವ್ಯಕ್ತವಾಗಿದೆ.

- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಟರ್ಮಿನಲ್‌-2ಅನ್ನು ಉದ್ಘಾಟಣೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೇವಲ 30 ನಿಮಿಷಗಳ ಕಾಲ ಸುರಿದ ಮಳೆಗೆ ಟರ್ಮಿನಲ್‌-2 ಮುಖ್ಯದ್ವಾರದಲ್ಲಿ ಮಳೆ ನೀರು ಸೋರಿಕೆಯಾಗಿದೆ ಮತ್ತು ಟರ್ಮಿಲ್‌ನ ಒಂದು ಬದಿಗೆ ನೀರು ನಿಂತಿದೆ. ‘₹5,000 ಕೋಟಿ ಟರ್ಮಿನಲ್‌ನ ನೈಜ ಮೌಲ್ಯ ಈಗ ಕಾಣುತ್ತಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.

“ಇದು ಅಮೆಜಾನ್‌ ಮಳೆಕಾಡಿನ ವಿಡಿಯೋ ಅಲ್ಲ. ಕರ್ನಾಟಕದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನ ವೀಡಿಯೊ. ಮೊದಲ ಮಳೆಗೆ ₹5000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವಿಮಾನ ನಿಲ್ದಾಣದ ಟರ್ಮಿನಲ್ ನೀರಿನಲ್ಲಿ ಮುಳುಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಹೊಸ ಮೂಲಸೌಕರ್ಯ” ಎಂದು ಸುಪ್ರೀಯಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ‘ಬುದ್ಧ ಪೂರ್ಣಿಮಾ’ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಹೊಸ ಟರ್ಮಿನಲ್‌ನ ಕರ್ಬ್‌ಸೈಡ್‌ನಲ್ಲಿ ಮಳೆ ನೀರು ಸೋರಿಕೆಯಾಗಿರುವುದನ್ನು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಟರ್ಮಿನಲ್‌-2ನ ನಿರ್ವಾಹಕರು ಖಚಿತಪಡಿಸಿದ್ದಾರೆ.

“ಮೇ 2ರಂದು ಸಂಜೆ ಸುರಿದ ಮಳೆಯಿಂದ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನ ಕೆರ್ಬ್‌ಸೈಡ್‌ನಲ್ಲಿ ಮಳೆ ನೀರು ಸೋರಿಕೆಯಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಎರಡು ಟರ್ಮಿನಲ್‌ಗಳಲ್ಲಿ ಮೂಲಸೌಕರ್ಯ ಮತ್ತು ಸುರಕ್ಷತೆಯ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಲಾಗಿದೆ” ಎಂದು ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...