ಹಂತ ಹಂತವಾಗಿ ರಾಜಕಾಲುವೆ ಒತ್ತುವರಿ ತೆರವು: ತುಷಾರ್ ಗಿರಿನಾಥ್

Date:

  • ರಾಜಕಾಲುವೆಯ ಒತ್ತುವರಿಗಳ ಪೈಕಿ 123 ಪ್ರಕರಣಗಳು ನ್ಯಾಯಾಲಯದಲ್ಲಿವೆ
  • 2015-16 ರಿಂದ ಇದುವರೆಗೆ ಒಟ್ಟಾರೆ 2951 ಒತ್ತುವರಿ ಗುರುತಿಸಲಾಗಿದೆ

ಬೆಂಗಳೂರಿನಲ್ಲಿ ಬಾಕಿಯಿರುವ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ಬುಧವಾರ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, “ಪಾಲಿಕೆಯ ಎಂಟು ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವು ಮಾಡಿ ರಾಜಕಾಲುವೆಗಳನ್ನು ನಿರ್ಮಿಸಬೇಕು. ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಒತ್ತುವರಿಗಳ ಪೈಕಿ 123 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಅವುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಂಡು ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಬೇಕು” ಎಂದು ತಿಳಿಸಿದರು.

“ಬಿಬಿಎಂಪಿ ವ್ಯಾಪ್ತಿಯಲ್ಲಿ 2015-16 ರಿಂದ ಇದುವರೆಗೆ ಒಟ್ಟಾರೆ 2951 ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 2183 ಒತ್ತುವರಿ ಈಗಾಗಲೇ ತೆರವುಗೊಳಿಸಲಾಗಿದ್ದು, 768 ಒತ್ತುವರಿ ತೆರವುಗೊಳಿಸಬೇಕಿದೆ. ಇದರಲ್ಲಿ 123 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿದ್ದು, 568 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭೂಮಾಪಕರಿಂದ ಮಾರ್ಕಿಂಗ್ ಪ್ರಕ್ರಿಯೆ ನಡೆಸಲಾಗಿದೆ. ತಹಶೀಲ್ದಾರರಿಂದ ನೋಟಿಸ್ ನೀಡಲಾಗುತ್ತಿದೆ. ಹಂತ-ಹಂತವಾಗಿ ತ್ವರಿತಗತಿಯಲ್ಲಿ ಎಲ್ಲ ಒತ್ತುವರಿಗಳ ತೆರವು ಕಾರ್ಯಚರಣೆ ನಡೆಯಲಿದೆ” ಎಂದು ಹೇಳಿದರು.

ಸಭೆಯಲ್ಲಿ ವಲಯ ಆಯುಕ್ತ, ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಕಾನೂನು ಕೋಶ ವಿಭಾಗದ ಮುಖ್ಯಸ್ಥರು, ಎಲ್ಲ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಅಕ್ರಮ ಒತ್ತುವರಿ: 13 ಕಟ್ಟಡ ನಿರ್ಮಾಣ ತೆರವು

ಕುಡಿಯುವ ನೀರಿನ ಸಮಸ್ಯೆ; ಬೋರ್‌ವೆಲ್ ಕೊರೆಸಲು ಸೂಚನೆ ನೀಡಿದ ಜಂಟಿ ಆಯುಕ್ತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಮಹದೇವಪುರ ವಲಯದಲ್ಲಿ 110 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಕೂಡಲೆ ಬೋರ್‌ವೆಲ್ ಕೊರೆದು ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ವಲಯ ಜಂಟಿ ಆಯುಕ್ತೆ ಡಾ. ದಾಕ್ಷಾಯಿಣಿ ತಿಳಿಸಿದರು.

ಮಹದೇವಪುರ ವಲಯದ ಹಗದೂರು ವಾರ್ಡ್ ಹಾಗೂ ಹೂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಬರುವ ಹಳ್ಳಿಗಳಿಗೆ ಭೇಟಿ ನೀಡಿ ಸ್ಥಳಿಯ ನಿವಾಸಿಗಳ ಅಹವಾಲುಗಳನ್ನು ಸ್ವೀಕರಿಸಿ ನೀರಿನ ಸಮಸ್ಯೆಯಿರುವ ಕಡೆ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಗದೂರು ವಾರ್ಡ್ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಾಮಗೊಂಡನಹಳ್ಳಿ, ನಲ್ಲೂರಹಳ್ಳಿ, ಪಟ್ಟಂದೂರು ಅಗ್ರಹಾರ, ಗಾಂಧಿಪುರ ಗ್ರಾಮಗಳಿಗೆ ಅವರು ಭೇಟಿ ನೀಡಿದರು. ರಾಮಗೊಂಡನಹಳ್ಳಿ ಹಾಗೂ ಗಾಂಧಿಪುರದಲ್ಲಿ ತಲಾ 2 ಬೋರ್ ವೆಲ್ ಕೊರೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆಯಲ್ಲಿ ಪಾಲಿಕೆಯ ಇಂಜಿನಿಯರ್‌ಗಳು, ಜಲಮಂಡಳಿಯ ಇಂಜಿನಿಯರ್‌ಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...