ಬೆಂಗಳೂರು | ರಾಜಕಾಲುವೆ ಅಕ್ರಮ ಒತ್ತುವರಿ: 13 ಕಟ್ಟಡ ನಿರ್ಮಾಣ ತೆರವು

Date:

  • 700 ಮೀಟರ್ ಉದ್ದದ ರಾಜಕಾಲುವೆಯ ಮೇಲೆ 13 ಕಟ್ಟಡ ನಿರ್ಮಾಣ
  • ರಾಜಕಾಲುವೆ ಒತ್ತುವರಿ ಮಾಡಿದವರಿಗೆ ತಹಶೀಲ್ದಾರ್ ಅವರಿಂದ ನೋಟಿಸ್

ಬೆಂಗಳೂರಿನ ಪುಲಕೇಶಿನಗರದ ಶಾಂಪುರನಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿದ್ದ ಸ್ಥಳದಲ್ಲಿ ಬುಧವಾರದಿಂದ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ಶಾಂಪುರ ವ್ಯಾಪ್ತಿಯಲ್ಲಿ ಸುಮಾರು 700 ಮೀಟರ್ ಉದ್ದದ ರಾಜಕಾಲುವೆಯ ಮೇಲೆ 13 ಕಟ್ಟಡಗಳನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಈಗಾಗಲೇ ಕಂದಾಯ ಇಲಾಖೆಯ ಭೂಮಾಪಕರಿಂದ ಒತ್ತುವರಿಯಾಗಿರುವ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ ಒತ್ತುವರಿ ಮಾಡಿರುವವರಿಗೆ ತಹಶೀಲ್ದಾರ್ ಅವರಿಂದ ನೋಟಿಸ್ ನೀಡಲಾಗಿದೆ.

ಕಂದಾಯ ಇಲಾಖೆಯ ಭೂಮಾಪಕರು, ವಾರ್ಡ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬೃಹತ್ ನೀರುಗಾಲುವೆ ವಿಭಾಗದ ಇಂಜಿನಿಯರ್ ನೇತೃತ್ವದಲ್ಲಿ ಬುಧವಾರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜಕಾಲುವೆಯ ಪ್ರದೇಶದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡಿರುವುದರಿಂದ ಎಲೆಕ್ಟ್ರಾನಿಕ್ ಟೋಟಲ್ ಸ್ಟೇಷನ್ (ಇಟಿಎಸ್‌) ಸರ್ವೇ ಮೂಲಕ ಮತ್ತೊಮ್ಮೆ ಸಮೀಕ್ಷೆ ನಡೆಸಿ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಈಗಾಗಲೇ ಗುರುತಿಸಿರುವಂತಹ ಒತ್ತುವರಿ ಪ್ರದೇಶದಲ್ಲಿ ಮನೆಯ ಮಾಲೀಕರೇ ಸ್ವಯಂಪ್ರೇರಿತವಾಗಿ ತೆರವು ಮಾಡಿಕೊಳ್ಳುತ್ತಿದ್ದು, ಇಟಿಎಸ್‌ ಸಮೀಕ್ಷೆ ಪೂರ್ಣಗೊಂಡ ಬಳಿಕ ಸಂಪೂರ್ಣ ಒತ್ತುವರಿಯನ್ನು ತೆರವುಗೊಳಿಸಿ ರಾಜಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರ್ಮಿಕರು, ಸಲಕರಣೆಗಳ ಸಮಸ್ಯೆಯಿಂದ ಕಾವೇರಿ 5ನೇ ಹಂತದ ಯೋಜನೆ ವಿಳಂಬ ಸಾಧ್ಯತೆ

ಚನ್ನಸಂದ್ರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಮಹದೇವಪುರ ವಲಯ ಕಾಡುಗೋಡಿ ವಾರ್ಡ್ ಚನ್ನಸಂದ್ರ ವ್ಯಾಪ್ತಿಯಲ್ಲಿ ಸುಮಾರು 30 ಮೀಟರ್ ಉದ್ದದ ರಾಜಕಾಲುವೆಯಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ಮಳಿಗೆಗಳನ್ನು ಸ್ವಯಂ ಪ್ರೇರಿತವಾಗಿ ಒತ್ತುವರಿದಾರರು ತೆರವುಗೊಳಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ ನಿಧನ: ಆತ್ಮಹತ್ಯೆ ಶಂಕೆ?

ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ರಣಜಿ ಆಟಗಾರ ಡೇವಿಡ್ ಜಾನ್ಸನ್​(52)...

ನಾಲ್ಕು ವರ್ಷಗಳಿಂದ ನಡೆಯದ ಬಿಬಿಎಂಪಿ ಚುನಾವಣೆ; ನಗರದ ಜನ ಏನಂದ್ರು?

ಸುಮಾರು ನಾಲ್ಕು ವರ್ಷಗಳಿಂದ ನಾನಾ ನೆಪ ಹೇಳಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲಾಗುತ್ತಿದೆ....

ಬೆಂಗಳೂರು | ನೂರರ ಗಡಿ ದಾಟಿದ ಟೊಮೆಟೊ ದರ; ದ್ವಿಶತಕದತ್ತ ಮುಖ ಮಾಡಿದ ಬೀನ್ಸ್‌

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ...