ಬೆಂಗಳೂರು | ಸಂಬಂಧಿಕರ ಮನೆಯಲ್ಲಿಯೇ ಕೋಟಿ ಬೆಲೆಬಾಳುವ ಚಿನ್ನ ದೋಚಿ ಪರಾರಿ; ಬಂಧನ

Date:

ಸಂಬಂಧಿಕರ ಮನೆಯಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನ, ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಮೊಹಮ್ಮದ್ ರಫೀಕ್(35) ಬಂಧಿತ ಆರೋಪಿ. ಬಂಧಿತನಿಂದ ₹1.10 ಕೋಟಿ ಮೌಲ್ಯದ 1.8 ಕೆಜಿ ಚಿನ್ನಾಭರಣ ಹಾಗೂ ₹74 ಸಾವಿರ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಏನಿದು ಪ್ರಕರಣ?

ಗುಜರಿ ವ್ಯಾಪಾರಿಯಾಗಿದ್ದ ಷಹನವಾಜ್ ತಿಲಕನಗರದ ಎಸ್‌.ಆರ್.ಕೆ ಗಾರ್ಡನ್ ಬಳಿ ತನ್ನ ಕುಟುಂಬದೊಂದಿಗೆ ವಾಸವಿದ್ದರು. ಇವರ ಕುಟುಂಬಕ್ಕೆ ಸಂಬಂಧಿಯಾಗಿದ್ದ ಆರೋಪಿ ಮೊಹಮ್ಮದ್ ರಫೀಕ್ ಆಗಾಗ ಇವರ ಮನೆಗೆ ಬಂದು ಹೋಗುತ್ತಿದ್ದನು. ಮೊದಲಿನಿಂದಲೂ ಷಹನವಾಜ್ ಅವರ ಐಷಾರಾಮಿ ಜೀವನದ ಬಗ್ಗೆ ಈತ ಅಸೂಯೆ ಹೊಂದಿದ್ದನು.

ಷಹನವಾಜ್ ಅವರ ಮನೆಯ ಬೀಗದ ಕೀ ಅಚ್ಚು ತೆಗೆದುಕೊಂಡು ತನ್ನ ಬಳಿ ಇಟ್ಟುಕೊಂಡಿದ್ದನು. ರಾಮನಗರದಲ್ಲಿ ಸಂಬಂಧಿಕರೊಬ್ಬರ ಮದುವೆ ಇದ್ದ ಕಾರಣ ಷಹನವಾಜ್ ಕುಟುಂಬ ತೆರಳಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಗಮನಿಸಿ ಆರೋಪಿ ನಕಲಿ ಕೀ ಬಳಸಿ, ಮನೆಗೆ ನುಗ್ಗಿ 2.5 ಕೆ‌ಜಿ ತೂಕದ ಚಿನ್ನಾಭರಣ, ₹8 ರಿಂದ ₹10 ಲಕ್ಷ ನಗದು ದೋಚಿ ಪರಾರಿಯಾಗಿದ್ದನು.

ಸೆಪ್ಟೆಂಬರ್ 25ರ ರಾತ್ರಿ ಷಹನವಾಜ್ ಕುಟುಂಬ ಮನೆಗೆ ಹಿಂತಿರುಗಿ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.

ತಕ್ಷಣ ಷಹನವಾಜ್ ತಿಲಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಲು ರಜೆಗಳ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಜನ; ವಾಹನ ಸಂಚಾರ ದಟ್ಟಣೆ ಹೆಚ್ಚಳ

ಆರೋಪಿಯಿಂದ ಸದ್ಯ ಪೊಲೀಸರು 1.8 ಕೆ.ಜಿ ಚಿನ್ನಾಭರಣ ಹಾಗೂ ₹74 ಸಾವಿರ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಹಣವನ್ನು ಆರೋಪಿ ತನ್ನ ಸಾಲಗಳನ್ನು ತೀರಿಸಲು ಬಳಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಷಹನವಾಜ್ ಅವರ ಮನೆಯಲ್ಲಿ ಮದುವೆ ತಯಾರಿ ನಡೆಯುತ್ತಿದ್ದ ಹಿನ್ನೆಲೆ, ಚಿನ್ನಾಭರಣ ಹಾಗೂ ನಗದು ತಂದಿಡಲಾಗಿತ್ತು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...