ಬೆಂಗಳೂರು | ಮಹಿಳಾ ಸಹ-ಪೈಲಟ್ ಮೇಲೆ ಅತ್ಯಾಚಾರ; ಪೈಲಟ್ ವಿರುದ್ಧ ಎಫ್‌ಐಆರ್‌

Date:

ಚಾರ್ಟರ್ಡ್ ವಿಮಾನದ ಕರ್ತವ್ಯದಲ್ಲಿದ್ದಾಗ ತನ್ನ ಮೇಲೆ ಪೈಲಟ್‌ ಅತ್ಯಾಚಾರ ಎಸಗಿದ್ದಾನೆಂದು ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಘಟನೆಯು ಬೆಂಗಳೂರಿನಲ್ಲಿ ನಡೆದಿದ್ದು, ಸಂತ್ರಸ್ತೆ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಘಟನೆ ಬೆಂಗಳೂರಿನಲ್ಲಿ ನಡೆದಿದ್ದ ಕಾರಣ ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಸಂತ್ರಸ್ತೆ ದಾಖಲಿಸಿರುವ ದೂರಿನ ಪ್ರಕಾರ, ನವೆಂಬರ್ 18ರಂದು ಘಟನೆ ನಡೆದಿದೆ. ಸಂತ್ರಸ್ತ ಮಹಿಳಾ ಸಹ-ಪೈಲಟ್ ಮತ್ತು ಇಬ್ಬರು ಪುರುಷ ಪೈಲಟ್‌ಗಳು ಬೇಗಂಪೇಟೆ ವಿಮಾನ ನಿಲ್ದಾಣದಿಂದ ಪುಟ್ಟಪರ್ತಿ ಮೂಲಕ ಬೆಂಗಳೂರಿಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸಿದ್ದರು. ಮರುದಿನ ಅವರನ್ನು ಮತ್ತೊಂದು ವಿಮಾನ ಚಾಲನೆಗೆ ನಿಯೋಜಿಸಿದ್ದರಿಂದ, ಮೂವರೂ ಹೋಟೆಲ್‌ನಲ್ಲಿ ತಂಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಂದು ರಾತ್ರಿ, ಪೈಲಟ್ ರೋಹಿತ್ ಶರಣ್ ಎಂಬಾತ ಧೂಮಪಾನ ಮಾಡಲು ತನ್ನೊಂದಿಗೆ ಹೊರಗೆ ಬರುವಂತೆ ಮಹಿಳಾ ಸಹ-ಪೈಲಟ್‌ಅನ್ನು ಒತ್ತಾಯಿಸಿದ್ದಾನೆ. ಆತನ ಮಾತಿಗೆ ಮಣಿದು ಆತನೊಂದಿಗೆ ಹೊರ ಹೋಗಲು ಸಂತ್ರಸ್ತೆ ಒಪ್ಪಿಕೊಂಡಿದ್ದಾರೆ. ಆದರೆ, ಆತ ಹೊರಗೆ ಕರೆದೊಯ್ಯುವ ಬದಲು, ತಾನು ತಂಗಿದ್ದ ಕೊಠಡಿ ಬಳಿ ಹೋಗಿದ್ದಾನೆ. ಆತನ ಕೊಠಡಿಯ ಬಾಗಿಲ ಬಳಿ ಹೋಗುತ್ತಿದ್ದಂತೆಯೇ, ಆರೋಪಿಯು ಆಕೆಯನ್ನು ಬಲವಂತವಾಗಿ ಕೊಠಡಿಯೊಳಕ್ಕೆ ಎಳೆದಿದ್ದಾನೆ. ಆಕೆಯ ಮೇಲೆ ಹಲ್ಲೆಗೈದು, ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆಯು ನವೆಂಬರ್ 20ರಂದು ಹೈದರಾಬಾದ್‌ಗೆ ಮರಳಿದ್ದು, ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ವಿಮಾನ ಮ್ಯಾನೇಜ್‌ಮೆಂಟ್‌ಗೆ ದೂರು ನೀಡಿದ್ದಾರೆ. ಬಳಿಕ, ಬೇಗಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದೀಗ, ಬೆಂಗಳೂರು ಪೊಲೀರಿಗೆ ವರ್ಗಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...